ಕೆ.ಎಸ್.ಈಶ್ವರಪ್ಪನವರ ಜನ್ಮದಿನದ ಅಂಗವಾಗಿ ಪ್ರತಿಭಾ ಪುರಸ್ಕಾರ

ಶಿವಮೊಗ್ಗ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ 77ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಜೂನ್ 10 ಮತ್ತು 11 ರಂದು ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರ ಭಕ್ತರ ಬಳಗದ ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರೋತ್ಸಾಹ ಧನ’ ನೀಡಲಾಗುತ್ತಿದೆ.

ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಪೋಷಕರು ವಿದ್ಯಾರ್ಥಿಯ ಅಂಕಪಟ್ಟಿ ಮತ್ತು ಆಧಾರ್ ಕಾರ್ಡ್‌ ನಕಲು ಪ್ರತಿ ಹಾಗೂ ಮೊಬೈಲ್ ಸಂಖ್ಯೆಯನ್ನು ಶಿವಮೊಗ್ಗ ನಗರದ ಗುಂಡಪ್ಪ ಶೆಡ್‌ ನಲ್ಲಿರುವ ಕೆ.ಎಸ್.ಈಶ್ವರಪ್ಪನವರ ಕಚೇರಿಗೆ ಜೂನ್ 01 ರ ಒಳಗಾಗಿ ತಲುಪಿಸುವಂತೆ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9448438196, 9900855404 ಹಾಗೂ 9482474343 ಗೆ ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...