ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಬೃಹತ್ ಪ್ರತಿಭಟನೆ

ಶಿವಮೊಗ್ಗ : ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ನಟ ಕಮಲಹಾಸನ್ ಹೇಳಿಕೆಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಕಮಲಹಾಸನ್ ಪ್ರತಿ ಕೃತಿ ದಹಿಸಿ  ನಗರದ ಬಸ್ ನಿಲ್ದಾಣದ ಅಶೋಕ ವೃತ್ತದ ಬಳಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್.ಹೆಚ್.ಎಸ್ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್.ಹೆಚ್.ಎಸ್ ಮಾತನಾಡಿ, ನಟ ಕಮಲ್ ಹಾಸನ್ ತಮಿಳು ಚಿತ್ರರಂಗದಲ್ಲಿ ಫ್ಲಾಪ್ ಆಗಿರುವ ಕಾರಣ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳೋ ಉದ್ದೇಶದಿಂದ ಕನ್ನಡವನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ತಮ್ಮ ಏಳಿಗೆಗೆ ಕನ್ನಡದ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವುದು. ರಾಜ್ಯಸಭೆಯಲ್ಲಿ ಸ್ಥಾನ ಪಡೆಯಲು ಕನ್ನಡವನ್ನು ಹತ್ತಿಕ್ಕಿ ತಮಿಳುನಾಡರ ಇದ್ದೇವೆ ಎಂಬ ಸಂದೇಶ ನೀಡಿದ್ದಾರೆ. ಕನ್ನಡಿಗರನ್ನು ಕೆಣಕುವ ಕೆಲಸ ಮಾಡಿರುವ ನಟ ಕಮಲ್ ಹಾಸನ್ ಅವರ ಅಭಿನಯದ ಚಲನಚಿತ್ರ ಜೂ.5 ರಂದು ಬಿಡುಗಡೆಯಾಗಲಿದ್ದು, ನಾವು ಅದನ್ನು ಶಿವಮೊಗ್ಗದಲ್ಲಿ ಬಿಡುಗಡೆಯಾಗಲು ಬಿಡುವುದಿಲ್ಲ ಎಂದು ಎಚ್ಚರಿಸಿದ ಅವರು, ಒಂದು ವೇಳೆ ಚಲನಚಿತ್ರ ಬಿಡುಗಡೆಯಾದರೆ ಚಲನಚಿತ್ರ ಮಂದಿರಕ್ಕೆ ಮುತ್ತಿಕ್ಕುವ ಕೆಲಸ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಮಾಡುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆ ವೇಳೆ ಕಮಲಹಾಸನ್ ರವರ ಫೋಟೋವನ್ನು ಸುಡುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಘಟಕ ಅಧ್ಯಕ್ಷ ಕವಿತಾ.ಸಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಾಲತೇಶ್, ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ್, ಜಿಲ್ಲಾ ಖಜಾಂಚಿ ಗಣೇಶ್, ಪ್ರಧಾನ ಕಾರ್ಯದರ್ಶಿ ಮಾಮಶ್ ಶಫಿ, ಶಿಕಾರಿಪುರದ ಗೌರವಾಧ್ಯಕ್ಷ ಶಿವಯ್ಯ ಶಾಸ್ತ್ರಿ, ಜೀವನ್, ಉಮೇಶ್, ಗದ್ದೆಮನೆ ಮನು, ಪರಶುರಾಮ್, ಸತೀಶ್, ರಾಮು, ಜಾದವ್, ಕೇಶವ, ಗಿರಿ, ಹನುಮಂತ, ಸಾಧಿಕ್ ಮುಂತಾದ ಕಾರ್ಯಕರ್ತರು, ಪದಾಧಿಕಾರಿಗಳು ಭಾಗವಹಿಸಿದ್ದರು.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...