
ಶಿವಮೊಗ್ಗ : ಅಂತರ ರಾಜ್ಯ ಕಳ್ಳ ಮಂಜುನಾಥ್ ಅಲಿಯಾಸ್ ಕಲ್ಕೆರೆ ಮಂಜು ಎಂಬಾತನ ಕಾಲಿಗೆ ಇಂದು ಬೆಳಗ್ಗೆ ಶಿವಮೊಗ್ಗ ಜಯನಗರ ಠಾಣೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಕಳೆದ ಕೆಲವು ದಿನದಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿರುವ ಸುಳಿವು ಲಭಿಸಿದ್ದು, ಖಚಿತ ಮಾಹಿತಿ ಮೇರೆಗೆ ಇಂದು ಬೆಳಗ್ಗೆ ಪೊಲೀಸರು ಬಂಧಿಸಲು ತೆರಳಿದ್ದರು. ಈ ಸಂದರ್ಭ ಪೊಲೀಸ್ ಸಿಬ್ಬಂದಿ ದ್ಯಾಮಪ್ಪ ಅವರ ಮೇಲೆ ಮಂಜ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಆತ್ಮರಕ್ಷಣೆಗಾಗಿ ಜಯನಗರ ಪಿಎಸ್‌ಐ ನವೀನ್ ಬ್ಯಾಕೋಡು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಬಳಿಕ ಕಲ್ಕೆರೆ ಮಂಜನ ಕಾಲಿಗೆ ಗುಂಡು ಹೊಡೆದಿದ್ದು, ಗುಂಡು ಮಂಜನ ಎಡಗಾಲಿಗೆ ತಗುಲಿದೆ. ಚಿಕಿತ್ಸೆಗಾಗಿ ಕಲ್ಕೆರೆ ಮಂಜನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು ಗಾಯಾಳು ಪೊಲೀಸ್ ಸಿಬ್ಬಂದಿ ದ್ಯಾಮಪ್ಪ ರವರಿಗೂ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಪೋಲಿಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ – ಕೆ.ಎಸ್.ಈಶ್ವರಪ್ಪನವರ ಹುಟ್ಟುಹಬ್ಬದ ಪ್ರಯುಕ್ತ ಜೂ.10,11 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ