
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ಯುವಕನೋರ್ವ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ನೀರುಪಾಲಾಗಿರುವ ಘಟನೆಯೊಂದು ಇಂದು (ಜು.20) ನಡೆದಿದೆ.
ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಪ್ರವಾಸಕ್ಕೆಂದು ಯಡೂರಿನ ಅಬ್ಬಿ ಜಲಪಾತದಲ್ಲಿ ನೀರಿಗೆ ಇಳಿದಿದ್ದ ರಮೇಶ್ (35), ವಿಡಿಯೋಗೆ ಪೋಸ್ ನೀಡುತ್ತಿದ್ದ ವೇಳೆ ಸಂಭ್ರಮಿಸಿದ್ದಾರೆ. ನಂತರ ಬಂಡೆಯಿಂದ ಕೆಳಗಿಳಿಯುವ ಸಂದರ್ಭದಲ್ಲಿ ನೀರಿನ ರಭಸಕ್ಕೆ ಏಕಾಏಕಿ ಕಾಲು ಜಾರಿ ನೀರು ಪಾಲಾಗಿದ್ದಾರೆ.
ಘಟನೆಯ ಬಳಿಕ ರಮೇಶ್ ಮೃತದೇಹವು ಫಾಲ್ಸ್‌ನ ಕೆಳಭಾಗದಲ್ಲಿ ಪತ್ತೆಯಾಗಿದ್ದು, ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ