ಹಕ್ಕಿಪಿಕ್ಕಿ ಸಮುದಾಯ, ಅಲೆಮಾರಿ ಕುಟುಂಬಗಳಿಗೆ ತಾಡಪಾಲು ನೀಡಿ ಅಗತ್ಯ ನೀಗಿಸುವ ಮಹತ್ಕಾರ್ಯ 

ಶಿವಮೊಗ್ಗ : ಮಳೆಗಾಲದ ಹಿನ್ನೆಲೆಯಲ್ಲಿ ಇಂದು ಮಲ್ಲಿಗೇನಹಳ್ಳಿ ಹಾಗೂ ಎಂಆರ್‌ಎಸ್ ವೃತ್ತದ ಬಳಿಯಲ್ಲಿ ನೆಲೆಸಿರುವ ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ತಾಡಪಾಲು ವಿತರಿಸಲಾಯಿತು.

ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ತಾಡಪಾಲು ವಿತರಣಾ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಭಾಗವಹಿಸಿ, ಒಟ್ಟು 44 ಕುಟುಂಬಗಳಿಗೆ ತಾಡಪಾಲು ವಿತರಿಸಿದರು.

ಮಳೆಗಾಲದ ಸವಾಲುಗಳನ್ನು ಎದುರಿಸುತ್ತಿರುವ ಹಕ್ಕಿಪಿಕ್ಕಿ ಹಾಗೂ ಅಲೆಮಾರಿ ಸಮುದಾಯದವರಿಗೆ ಹೆಚ್ಚಿನ ಮೂಲಸೌಕರ್ಯಗಳನ್ನು ಕಲ್ಪಿಸುವ ಹಾಗೂ ಶಾಶ್ವತ ನೆಲೆ ಕಂಡುಕೊಳ್ಳುವ ನಿಟ್ಟಿನಲ್ಲಿ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ರಾಜ್ಯ ಸರ್ಕಾರಕ್ಕೆ ಪ್ರಸ್ತಾವಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಪಲ್ಲವಿ.ಜಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯ ಪ್ರಮುಖರು ಹಾಜರಿದ್ದರು.

ಇದನ್ನೂ ಓದಿ ⇒ ಜಿಲ್ಲಾ ಉಸ್ತುವಾರಿ ಸಚಿವರಿಂದ ಮೆಗ್ಗಾನ್ ಆಸ್ಪತ್ರೆಗೆ ದಿಢೀರ್ ಭೇಟಿ-ವೀಕ್ಷಣೆ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...