
ಶಿವಮೊಗ್ಗ : ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರವರು ಆ.04 ರಂದು ಜಿಲ್ಲಾ ಪ್ರವಾಸ ಕೈಗೊಂಡಿರುತ್ತಾರೆ.
ಆ.04 ರಂದು ಬೆ.9.00ಕ್ಕೆ ಸರ್ಕೂಟ್ ಹೌಸ್‌ನಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಬೆ.9.30ಕ್ಕೆ ಸಿದ್ಲಿಪುರದಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಲೋಕಾರ್ಪಣೆ. ಬೆ.11.00ಕ್ಕೆ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಶಿವಮೊಗ್ಗ ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವರು.
ಮಧ್ಯಾಹ್ನ 2.30ಕ್ಕೆ ಭದ್ರಾವತಿಗೆ ತೆರಳಿ ಮ.3.00ಕ್ಕೆ ಬೈಪಾಸ್ ರಸ್ತೆಯ ಉಚ್ಚನಿಪುರದಲ್ಲಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಸಮುದಾಯ ಭವನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.
ಆ.03 ರಂದು ರಾತ್ರಿ 9.00ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.
ಸಂಜೆ 5.00ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.