ಶಿವಮೊಗ್ಗ : ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆಯ ಸಂದರ್ಭದಲ್ಲಿ ಬಹು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಲಿರುವುದರಿಂದ ಸಾರ್ವಜನಿಕರಿಗೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧ-ಮಾರ್ಗ ಬದಲಾವಣೆ ಮಾಡಿ ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಸಾರ್ವಜನಿಕ ಹಿತದೃಷ್ಠಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಮೋಟಾರು ವಾಹನ ಕಾಯ್ದೆ 1988 ಕಲಂ 116ರ ಅನ್ವಯ ದಿನಾಂಕ: 16.08.2025 ರಂದು ಬೆಳಿಗ್ಗೆ 6.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ತಾತ್ಕಾಲಿಕವಾಗಿ ವಾಹನಗಳ ಸಂಚಾರ ನಿಷೇಧ ಹಾಗೂ ಮಾರ್ಗ ಬದಲಾವಣೆ ಮಾಡಲಾಗಿದೆ.
ಇದನ್ನೂ ಓದಿ » ವೈಭವದ ಗುಡ್ಡೇಕಲ್ ಹರೋಹರ ಜಾತ್ರೆ, ಭಕ್ತಿ ಸಮರ್ಪಿಸಿದ ಭಕ್ತ ಸಾಗರ
ವಾಹನಗಳ ಮಾರ್ಗ ಬದಲಾವಣೆಯ ವಿವರ :
- ಬೆಂಗಳೂರು, ಭದ್ರಾವತಿ ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ ಮತ್ತು ಎಲ್ಲಾ ಬಸ್ಗಳು ಮತ್ತು ಸಿಟಿ ಬಸ್ಗಳು ಹಾಗೂ ಕಾರು ವಾಹನಗಳು ಎಂ ಆರ್ ಎಸ್ ಸರ್ಕಲ್ ನಿಂದ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
- ಶಿವಮೊಗ್ಗ ನಗರದಿಂದ ಬೆಂಗಳೂರು, ಭದ್ರಾವತಿ, ಚಿತ್ರದುರ್ಗ, ಹೊಳೆಹೊನ್ನೂರು ಹೋಗುವ ಎಲ್ಲ ಭಾರೀ ವಾಹನ ಮತ್ತು ಎಲ್ಲಾ ಬಸ್ಗಳು ಮತ್ತು ಸಿಟಿ ಬಸ್ಗಳು ಹಾಗೂ ಕಾರು ವಾಹನಗಳು ಬೈಪಾಸ್ ರಸ್ತೆ ಎಂ ಆರ್ ಎಸ್ ಸರ್ಕಲ್ ಮುಖಾಂತರ ಹೋಗುವುದು.
- ಚಿತ್ರದುರ್ಗ ಹೊಳೆಹೊನ್ನೂರುನಿಂದ ಶಿವಮೊಗ್ಗ ನಗರಕ್ಕೆ ಒಳ ಬರುವ ಮತ್ತು ಹೊರ ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್ಗಳು ಭದ್ರಾವತಿ ಮಾರ್ಗವಾಗಿ ಬೈಪಾಸ್ ರಸ್ತೆ ಮಾರ್ಗವಾಗಿ ಶಿವಮೊಗ್ಗ ನಗರಕ್ಕೆ ಒಳಬರುವುದು ಮತ್ತು ಹೊರಹೋಗುವುದು.
- ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಲಘು ವಾಹನಗಳು ಪಿಳ್ಳಂಗಿರಿ ಕ್ರಾಸ್ನಿಂದ ಯಲವಟ್ಟಿ ಮಾರ್ಗವಾಗಿ ಮತ್ತು ಹೊಳಬೆನವಳ್ಳಿ ತಾಂಡ ಕ್ರಾಸ್ನಿಂದ ಯಲವಟ್ಟಿ ಮಾರ್ಗವಾಗಿ ಮಲವಗೊಪ್ಪ ಮೂಲಕ ಬಿ.ಹೆಚ್. ರಸ್ತೆಗೆ ಸೇರಿಕೊಂಡು ಬೈಪಾನ್ ರಸ್ತೆಯ ಮಾರ್ಗವಾಗಿ ಶಿವಮೊಗ್ಗ ನಗರಕ್ಕೆ ಹೋಗುವುದು.
- ಶಿವಮೊಗ್ಗ ನಗರದಿಂದ ಹೊಳೆಹೊನ್ನೂರು ಚಿತ್ರದುರ್ಗಕ್ಕೆ ಹೋಗುವ ಲಘು ವಾಹನಗಳು (ದ್ವಿಚಕ್ರ ಮತ್ತು ಕಾರು ವಾಹನಗಳು) ಬೈಪಾಸ್ ರಸ್ತೆಯ ಮಾರ್ಗವಾಗಿ ಮಲವಗೊಪ್ಪದ ಯಲವಟ್ಟಿ ಕ್ರಾಸ್ನಿಂದ ಯಲವಟ್ಟಿ ಮಾರ್ಗವಾಗಿ ಪಿಳ್ಳಂಗಿರಿ ಕ್ರಾಸ್ ಮೂಲಕ ಹೊಳೆಹೊನ್ನೂರು ಚಿತ್ರದುರ್ಗಕ್ಕೆ ಹೋಗುವುದು.
- ಹರಿಹರ ಹೊನ್ನಾಳಿಯಿಂದ ಬರುವ ಎಲ್ಲಾ ಭಾರೀ ವಾಹನ ಎಲ್ಲಾ ಬಸ್ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್ ಕೆ.ಇ.ಬಿ ಸರ್ಕಲ್ ಉಷಾ ನರ್ಸಿಂಗ್ ಹೋಂ ಸರ್ಕಲ್, 100 ಅಡಿ ರಸ್ತೆ ವಿನೋಬನಗರ ಮಾರ್ಗವಾಗಿ ಹೋಗುವುದು.
- ಹೊಳೆಹೊನ್ನೂರು ಸರ್ಕಲ್ನಿಂದ ಗುರುಪುರದ ಯಲವಟ್ಟಿ ಕ್ರಾಸ್ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ಸಂಚಾರ ನಿಷೇಧ ಮಾಡಲಾಗಿದೆ.
ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.