
ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರ ವತಿಯಿಂದ ಆ.29 ರಂದು ಬೆಳಿಗ್ಗೆ 10.00 ಗಂಟೆಗೆ ಸಾಗರ ರಸ್ತೆಯಲ್ಲಿರುವ ಪಂಪಾನಗರದ ಗುತ್ಯಪ್ಪ ಕಾಲೋನಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಇದನ್ನೂ ಓದಿ » ಜಿಲ್ಲೆಯಲ್ಲಿ ಸಡಗರ-ಸಂಭ್ರಮದ ಗೌರಿ ಗಣೇಶ ಹಬ್ಬ, ಮಾರುಕಟ್ಟೆಯಲ್ಲೀಗ ಗಣಪನದೇ ಮೆರಗು..
ನೇರ ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿಯಲ್ಲಿ ತೆರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ತಮ್ಮ ಸ್ವವಿವರ ಹಾಗೂ ಆಧಾರ್ ಕಾರ್ಡ್ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂ.ಸಂ: 08182-255293, 9380663606 ಗೆ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.