
ಶಿವಮೊಗ್ಗ : ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ರವರು ನಾಳೆ (ಸೆ.20) ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದ್ದಾರೆ.
ಇದನ್ನೂ ಓದಿ ಸೆ.21ಕ್ಕೆ ನಮೋ ಯುವ ರನ್ ಮ್ಯಾರಥಾನ್, ಗಿನ್ನೀಸ್ ದಾಖಲೆಯ ಕಾರ್ಯಕ್ರಮ
ನಾಳೆ (ಸೆ.20) ರಂದು ಬೆಳಗ್ಗೆ 10.30ಕ್ಕೆ ಸರ್ಜಿ ಕನ್ವೆನ್ಷನ್ ಹಾಲ್ನಲ್ಲಿ ನಡೆಯುವ ವೈದ್ಯರ ಸಮಾವೇಶದಲ್ಲಿ ಪಾಲ್ಗೊಂಡು, ನಂತರ ಮಧ್ಯಾಹ್ನ 12.00 ಗಂಟೆಗೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡಿ ಪ್ರ,ಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿರುತ್ತಾರೆ.