ಒಡ್ಡಿನಕೊಪ್ಪ ಗ್ರಾಮದಲ್ಲಿ ಮನೆ ಬಾಗಿಲ ಬೀಗ ಮುರಿದು ಕಳ್ಳತನ

ಶಿವಮೊಗ್ಗ : ಶಿವಮೊಗ್ಗದ ಒಡ್ಡಿನಕೊಪ್ಪ ಗ್ರಾಮದಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ರಾತ್ರೋರಾತ್ರಿ ಬಾಗಿಲಿನ ಬೀಗ ಮುರಿದು ನಗದು, ಚಿನ್ನಾಭರಣವನ್ನು ಕಳ್ಳತನ ಮಾಡಲಾಗಿದ್ದು, ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ » ದೀಪಾವಳಿ ಸಂಭ್ರಮದ ನಡುವೆಯೂ ತಂಪೆರೆದ ವರುಣನ ಸಿಂಚನ, ನಗರದಲ್ಲಿ ಹೇಗಿದೆ ವಾತಾವರಣ?

ಕರಿಯಪ್ಪ, ಯಶೋದಮ್ಮ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಬಾಗಿಲಿನ ಬೀಗ ಮುರಿದು ಬೀರುವಿನಲ್ಲಿದ್ದ ರೂ.80,000 ನಗದು, ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ದೀಪಾವಳಿ ಹಬ್ಬದ ಹಿನ್ನೆಲೆ ಸಂಬಂಧಿಕರ ಮನೆಗೆ ತೆರಳಿದ್ದಾಗ ಈ ಘಟನೆ ನಡೆದಿದೆ. ವಿಷಯ ತಿಳಿದು ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...