
ಶಿವಮೊಗ್ಗ : ಶಿವಮೊಗ್ಗ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ 16 ಕಾರ್ಯಕರ್ತೆಯರು ಮತ್ತು 93 ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
![]()
ಆಸಕ್ತ ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ https://karnemakaone.kar.nic.in/abcd/ ಮೂಲಕ ಡಿ.15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಮೇಲಿನ ವೆಬ್‌ಸೈಟ್ ಅಥವಾ ಶಿವಮೊಗ್ಗ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವುದು.