ಶಿವಮೊಗ್ಗದಲ್ಲಿ ಮಾರ್ಕ್ ಸಿನಿಮಾ ಬಿಡುಗಡೆಯ ಅಬ್ಬರ, ವೀಡಿಯೋ ಕಾಲ್ ಮೂಲಕ ಶಿವಮೊಗ್ಗ ಅಭಿಮಾನಿಗಳಿಗೆ ಮಾತನಾಡಿಸಿದ ಕಿಚ್ಚ

ಶಿವಮೊಗ್ಗ : ‘ಮಾರ್ಕ್’ ಸಿನಿಮಾವು ಕಿಚ್ಚ ಸುದೀಪ್ ಅಭಿನಯಿಸಿದ ಒಂದು ಕನ್ನಡ ಚಲನಚಿತ್ರವಾಗಿದೆ. ಕಿಚ್ಚ ಸುದೀಪ್ ಅಭಿನಯದ ಈ ಚಿತ್ರವು ನಾಳೆ (ಡಿಸೆಂಬರ್ 25, 2025) ರಂದು ತೆರೆಕಾಣಲಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ನಗರದಲ್ಲಿ ಕಿಚ್ಚನ ಅಭಿಮಾನಿಗಳಿಂದ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಿತು.

‘ಮಾರ್ಕ್’ ಸಿನಿಮಾವು ವಿಜಯ್ ಕಾರ್ತಿಕೇಯ ನಿರ್ದೇಶನದಲ್ಲಿ ಮೂಡಿಬಂದ ಆಕ್ಷನ್-ಡ್ರಾಮಾ ಚಿತ್ರವಾಗಿದ್ದು, ಟ್ರೇಲರ್‌ಗಳು ಈಗಾಗಲೇ ಬಿಡುಗಡೆಯಾಗಿವೆ.

ನಾಳೆ ಸಿನಿಮಾ ಬಿಡುಗಡೆಯ ಹಿನ್ನೆಲೆ ಇಂದು ಸಂಜೆ ಶಿವಮೊಗ್ಗ ನಗರದಲ್ಲಿ ಕಿಚ್ಚನ ಶಿವಮೊಗ್ಗದ ಅಭಿಮಾನಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಕಿಚ್ಚ ಸುದೀಪ್ ಅವರು ವೀಡಿಯೋ ಕಾಲ್ ಮೂಲಕ ಅಭಿಮಾನಿಗಳಿಗೆ ಮಾತನಾಡಿಸಿದ್ದಾರೆ. ಪ್ರೀತಿಯಿಂದ ಸಿನಿಮಾ ನೋಡುವಂತೆ ಕರೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಕಿಚ್ಚನ ಮಾರ್ಕ್ ಸಿನಿಮಾ ಬಿಡುಗಡೆಯ ಅಬ್ಬರ ಸಂಭ್ರಮದ ವಾತಾವರಣವನ್ನು ಸೃಷ್ಟಿಸಿದೆ.

ಅಲ್ಲದೇ ಕಿಚ್ಚನ ಪ್ರತಿಮೆಯನ್ನು ರಾಮಣ್ಣ ಶ್ರೇಷ್ಠಿ ಪಾರ್ಕ್ ಯಿಂದ ಮಲ್ಲಿಕಾರ್ಜುನ ಚಿತ್ರಮಂದಿರದವರೆಗೂ ಮೆರವಣಿಗೆ ಮೂಲಕ ಕರೆತರಲಾಗಿದೆ. ಶಿವಮೊಗ್ಗದ ಕಿಚ್ಚನ ಅಭಿಮಾನಿಗಳು ಕಿಚ್ಚನ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಮಾರ್ಕ್ ಸಿನಿಮಾವು ಕಿಚ್ಚನ ಅಭಿಮಾನಿಗಳಿಗೆ ಹಬ್ಬದ ಮೆರುಗನ್ನು ನೀಡಿದೆ.

ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಬಿಡುಗಡೆಯ ಜೊತೆಗೆ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ನಿರ್ದೇಶನದಲ್ಲಿ ಮೂಡಿ ಬಂದಿರುವ ಶಿವರಾಜ್‌ಕುಮಾರ್‌, ಉಪೇಂದ್ರ ಹಾಗೂ ರಾಜ್‌ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಸಿನಿಮಾ ಕೂಡ ನಾಳೆ (ಡಿ.25, 2025 ರಂದು) ತೆರೆಕಾಣಲಿದೆ. ಈಗಾಗಲೇ ಈ ಸಿನಿಮಾ ಟ್ರೇಲರ್‌ ಎಲ್ಲರ ಗಮನ ಸೆಳೆದಿದೆ. ಅಲ್ಲದೇ ನಟ ಶಿವರಾಜ್‌ಕುಮಾರ್ ಅವರು ಮಹಿಳಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಾಗುವಂತೆ ಮಾಡಿದೆ. ಸದ್ಯ ‘ಮಾರ್ಕ್’ ಹಾಗೂ ’45’ ಸಿನಿಮಾ ಒಂದೇ ದಿನ ತೆರೆಗೆ ಬರುತ್ತಿದ್ದು, ಪ್ರೇಕ್ಷಕರು ಹೇಗೆ ಪ್ರತಿಕ್ರಿಯಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ »» ಬಗೆಹರಿಯದ ವಾಹನಗಳ ಪಾರ್ಕಿಂಗ್ ಸಮಸ್ಯೆ, ರಸ್ತೆ ಬದಿಯ ವಾಹನಗಳ ನಿಲುಗಡೆಗೆ ಕಡಿವಾಣ ಯಾವಾಗ?

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...