ಶಿವಮೊಗ್ಗ: ಸಂಭ್ರಮದ ಕ್ರಿಸ್‌ಮಸ್ ಆಚರಣೆ ಹಾಗೂ ವಿಶೇಷ ಪ್ರಾರ್ಥನೆ

ಶಿವಮೊಗ್ಗ : ಜಗತ್ತಿಗೆ ತ್ಯಾಗ, ಪ್ರೀತಿಯ ಸಂದೇಶ ಸಾರಿದ ಸಂತ ಏಸು ಕ್ರಿಸ್ತರ ಜನ್ಮ ದಿನವನ್ನು ಕ್ರೈಸ್ತ ಬಾಂಧವರು ಇಂದು (ಗುರುವಾರ) ಶಿವಮೊಗ್ಗ ನಗರದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು.

ಇದನ್ನೂ ಓದಿ » ಬಗೆಹರಿಯದ ವಾಹನಗಳ ಪಾರ್ಕಿಂಗ್ ಸಮಸ್ಯೆ, ರಸ್ತೆ ಬದಿಯ ವಾಹನಗಳ ನಿಲುಗಡೆಗೆ ಕಡಿವಾಣ ಯಾವಾಗ?

ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲ್ಲಿರುವ ಚರ್ಚ್, ಶಿವಪ್ಪನಾಯಕ ಹೂವಿನ ಮಾರುಕಟ್ಟೆ ಬಳಿಯಿರುವ ಸಂತ ಥಾಮಸ್ ಚರ್ಚ್, ಶರಾವತಿ ನಗರ, ಸಾಗರ ಗೇಟ್ ಸಮೀಪಲ್ಲಿರುವ ಚರ್ಚ್, ಗೋಪಾಳದಲ್ಲಿರುವ ಚರ್ಚ್ ನಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಚರ್ಚ್ ಗಳನ್ನು ವಿಶೇಷವಾಗಿ ಸಿಂಗರಿಸಲಾಗಿತ್ತು. ಹಲವೆಡೆ ಮಾಡಲಾಗಿದ್ದ ವರ್ಣರಂಜಿತ ದೀಪಾಲಾಂಕರದ ವ್ಯವಸ್ಥೆ ನೋಡುಗರಿಗೆ ಮನಸೂರೆಗೊಂಡಿತು.

ಕ್ರಿಸ್ ಮಸ್ ಆಚರಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಸೆಕ್ರೆಡ್ ಹಾರ್ಟ್ ಚರ್ಚ್ ನಲ್ಲಿ ಜನರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಹಾಗೆಯೇ ಕ್ರಿಸ್‌ಮಸ್ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಅಲಂಕಾರವು ನೋಡುಗರ ಗಮನ ಸೆಳೆದವು.


ಬೆಳಿಗ್ಗೆಯಿಂದಲೇ ಚರ್ಚ್‌ಗೆ ಆಗಮಿಸುತ್ತಿದ್ದ ಕ್ರಿಶ್ಚಿಯನ್ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮೇಣದ ಬತ್ತಿ ಹಚ್ಚಿ, ಇಷ್ಟಾರ್ಥ ಈಡೇರಿಸುವಂತೆ ಭಗವಂತನಲ್ಲಿ ಪ್ರಾರ್ಥಿಸಿದರು. ಕ್ರಿಸ್‌ಮಸ್ ಟ್ರೀ, ಏಸುವಿನ ಜನನ ಸಂದರ್ಭದ ಕ್ಷಣಗಳನ್ನು ನೆನಪಿಸುವ ಗೋದಲಿ ನೋಡುಗರ ಗಮನ ಸೆಳೆಯುವಂತಿತ್ತು.

ಬುಧವಾರ ಮಧ್ಯರಾತ್ರಿ ಹಾಗೂ ಮುಂಜಾನೆ ವಿಶೇಷ ಪ್ರಾರ್ಥನೆಗಳಲ್ಲಿ ಕ್ರೈಸ್ತ ಧರ್ಮಿಯರು ಪಾಲ್ಗೊಂಡಿದ್ದರು. ಚರ್ಚ್‌ಗಳಲ್ಲಿ ಕೇಕ್, ಚಾಕಲೇಟ್, ಸಿಹಿ ತಿಂಡಿ ಹಂಚಲಾಯಿತು. ಮನೆಯಲ್ಲಿ ವಿಶೇಷ ಖಾದ್ಯಗಳನ್ನು ತಯಾರಿಸಿ ಹಬ್ಬದೂಟ ಮಾಡಲಾಯಿತು. ಚರ್ಚ್‌ಗಳಲ್ಲಿ ಶುಭಾಶಯ ಗೀತೆಗಳು, ಕ್ರಿಸ್ತರ ಸ್ತುತಿಯ ಗೀತೆಗಳು ಸಾಮೂಹಿಕವಾಗಿ ಕೇಳಿಬಂದವು.

ಚರ್ಚ್‌ ನಲ್ಲಿ ಫಾದರ್ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ಪ್ರಾರ್ಥನೆ ನಡೆಯಿತು. ಕ್ರಿಸ್ತರ ಜನನದ ಶುಭ ಗಳಿಗೆಯ ಸ್ಮರಣೆಗೆ ಬೆಳಕಿನ ಸಂಕೇತವಾಗಿ ಮೇಣದ ಬತ್ತಿ ಬೆಳಗಿಸಲಾಯಿತು. ಪುಟ್ಟ ಮಕ್ಕಳು ಸಾಂತಾ ಕ್ಲಾಸ್ ಸೇರಿ ತರಹೇವಾರಿ ವೇಷ ಧರಿಸಿ ಪುಟ್ಟ ಮಕ್ಕಳು ಗಮನ ಸೆಳೆದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಾರ್ಕ್ ಸಿನಿಮಾ ಬಿಡುಗಡೆಯ ಅಬ್ಬರ, ವೀಡಿಯೋ ಕಾಲ್ ಮೂಲಕ ಶಿವಮೊಗ್ಗ ಅಭಿಮಾನಿಗಳಿಗೆ ಮಾತನಾಡಿಸಿದ ಕಿಚ್ಚ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...