
ಶಿವಮೊಗ್ಗ : ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಕುಮಾರ್ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ Dog Show, ವಿವಿಧ ತಳಿಯ ಶ್ವಾನ ಪ್ರದರ್ಶನ, ನೋಂದಣಿಗೆ ಕೊನೆಯ ದಿನ ಯಾವಾಗ?
ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಅವರು ಭೇಟಿ ನೀಡಿದರು. ಜೈಲು ಪರಿಶೀಲನೆ ನಡೆಸಿದ ಅವರು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು.
ಹಿರಿಯ ಪೊಲೀಸ್ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಅಲೋಕ್ ಕುಮಾರ್ ಅವರನ್ನು ಸ್ವಾಗತಿಸಿದರು.
ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್.ಬಿ, ಹೆಚ್ಚುವರಿ ರಕ್ಷಣಾಧಿಕಾರಿ ಕಾರಿಯಪ್ಪ, ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ. ರಂಗನಾಥ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.