
ಶಿವಮೊಗ್ಗ : ಶಿವಮೊಗ್ಗ ನಗರದ ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ ಮತ್ತು ಸೂಳೆಬೈಲ್ ಬೆಟ್ಟದ ಮಲ್ಲೇಶ್ವರ ದೇವಸ್ಥಾನದಲ್ಲಿ ಫೆ.15 ರಂದು ಶಿವರಾತ್ರಿ ಹಬ್ಬದ ಪ್ರಯುಕ್ತ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಬಂದು ಹೋಗುವುದರಿಂದ ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿ ಫೆ.15 ರ ಬೆಳಗ್ಗಿನ ಜಾವ 4.00 ರಿಂದ ಫೆ.16 ರ ಬೆಳಗ್ಗಿನ ಜಾವದವರೆಗೆ ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ನೀಡಿದ್ದಾರೆ.
ತೀರ್ಥಹಳ್ಳಿ ಮಾರ್ಗವಾಗಿ ಓಡಾಡುವ ವಾಹನಗಳನ್ನು ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುವ ವಾಹನಗಳು ಗಜಾನನ ಗ್ಯಾರೇಜ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್.ಹೆಚ್. ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು. ಹಾಗೂ ತೀರ್ಥಹಳ್ಳಿಯಿಂದ ಬರುವ ಎಲ್ಲಾ ವಾಹನಗಳು ಎನ್.ಹೆಚ್.ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್ ನಿಂದ ಗಜಾನನ ಗ್ಯಾರೇಜ್ ಮೂಲಕ ಬಂದು ಶಿವಮೊಗ್ಗ ಸೇರುವಂತೆ ಆದೇಶದಲ್ಲಿ ತಿಳಿಸಿರುತ್ತಾರೆ.
ಇದನ್ನೂ ಓದಿ » ಡಾಲಿ ಧನಂಜಯ್ ಕೈಯಲ್ಲಿ ರಾಷ್ಟ್ರಮಟ್ಟದ ಟಗರು ಕಾಳಗದ ಟ್ರೋಫಿ ಅನಾವರಣ