ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಏನಿದು ಪ್ರಕರಣ?

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗದ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಬ್ಬರನ್ನು ಬಂಧಿಸಲಾಗಿದೆ.

ಇದನ್ನೂ ಓದಿ » ಶ್ರೀ ಅರಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ನಾದಮಯ ಕಾರ್ಯಕ್ರಮ

ಓತಿಘಟ್ಟ ಗ್ರಾಮದ ಕೇಶವಮೂರ್ತಿ ಎಂಬುವವರು ತಮ್ಮ ಎರಿಟಿಗಾ ಕಾರನ್ನು ಕಳೆದ ಎರಡು ವರ್ಷಗಳಿಂದ ಶಿವಮೊಗ್ಗ ವಿಶೇಷ ಭೂ ಸ್ವಾಧೀನಾಧಿಕಾರಿ (ಎನ್.ಹೆಚ್-206) ಕಚೇರಿಗೆ ಬಾಡಿಗೆಗೆ ನೀಡಿದ್ದರು. 2025ರ ನವೆಂಬರ್ ತಿಂಗಳ ಬಾಡಿಗೆ ಹಣದ ಚೆಕ್ ನೀಡಲು ವಿಶೇಷ ಭೂ ಸ್ವಾಧೀನಾಧಿಕಾರಿ ಸಿದ್ದಲಿಂಗ ರೆಡ್ಡಿ ಅವರು ರೂ.40,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕೇಶವಮೂರ್ತಿ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಫೆ.14ರ ಸಂಜೆ ಸಿದ್ದಲಿಂಗ ರೆಡ್ಡಿ ಅವರ ಸೂಚನೆಯಂತೆ ಹೊಳಲೂರು ನಾಡ ಕಚೇರಿಯ ಗ್ರಾಮ ಸಹಾಯಕ ರಾಜೇಶ್, ಶಿವಮೊಗ್ಗದ ನೆಹರೂ ಸ್ಟೇಡಿಯಂ ಬಳಿ ಕೇಶವಮೂರ್ತಿ ಅವರಿಂದ ರೂ.40,000 ಹಣ ಪಡೆಯುತ್ತಿದ್ದರು. ಈ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಹಣದೊಂದಿಗೆ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಚಂದ್ರಶೇಖರ್.ಬಿ.ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಪೊಲೀಸ್ ನಿರೀಕ್ಷಕರಾದ ಕೆ.ಪಿ.ರುದ್ರೇಶ್, ಗುರುರಾಜ್ ಮೈಲಾರ್, ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿ ಯೋಗೇಶ್.ಜಿ.ಸಿ, ಟೀಕಪ್ಪ, ಸುರೇಂದ್ರ.ಹೆಚ್.ಸಿ, ಬಿ.ಟಿ.ಚನ್ನೇಶ್, ದೇವರಾಜ್, ಅರುಣ್ ಕುಮಾರ್.ಯು.ಬಿ, ಪ್ರಕಾಶ್ ಬಾರಿಮರದ್, ಆದರ್ಶ್, ಚಂದ್ರಿಬಾಯಿ, ಪ್ರದೀಪ್, ಗೋಪಿ, ಚೇತನ್ ಮತ್ತು ಆನಂದ್ ಪಾಲ್ಗೊಂಡಿದ್ದರು.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...