ಪಾರದರ್ಶಕ ಹಾಗೂ ನಿಖರ ಜನಗಣತಿಗೆ ಡಿಸಿ ಸೂಚನೆ 

ಶಿವಮೊಗ್ಗ : ಜನ ಗಣತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ನಿಖರವಾಗಿ ನಡೆಸುವಂತೆ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿಳಾದ ಪ್ರಭುಲಿಂಗ ಕವಳಿಕಟ್ಟಿಯವರು ನಿರ್ದೇಶನ ನೀಡಿದರು.

ಇದನ್ನೂ ಓದಿ » ಐಪಿಎಲ್ ಟಿಕೆಟ್ ನಿರಾಕರಿಸಿದ ಶಾಸಕ ಚೆನ್ನಿ, ಸ್ಪೀಕರ್ ಗೆ ಬರೆದ ಪತ್ರದಲ್ಲೇನಿದೆ?

ನಗರದ ಬಿ ಹೆಚ್ ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಶಿವಮೊಗ್ಗ ಗ್ರಾಮಾಂತರ ವಿಭಾಗದ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗಣತಿ ಸಂದರ್ಭದಲ್ಲಿ ಪ್ರತಿಯೊಂದು ಕುಟುಂಬದ ಸದಸ್ಯರು ನೀಡುವ ಮಾಹಿತಿ ಅತ್ಯಂತ ನಿಖರವಾಗಿರಬೇಕು. ಉಪಜಾತಿ ಮತ್ತು ಪರ್ಯಾಯ ಹೆಸರುಗಳ ಬಗ್ಗೆ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದ ಅವರು ಸ್ವಯಂ ಗಣತಿ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಜಿಲ್ಲೆಯ ಪ್ರತಿಯೊಂದು ಮನೆ ಮತ್ತು ಪ್ರದೇಶದ ನಿವಾಸಿಗಳನ್ನು ಈ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಒಳಪಡಿಸಬೇಕು. ಯಾವುದೇ ಒಂದು ಕುಟುಂಬವೂ ಗಣತಿಯಿಂದ ವಂಚಿತವಾಗಬಾರದು. ಗಣತಿಗಾಗಿ ಬಳಸಲಾಗುವ ಡಿಜಿಟಲ್ ಪೋರ್ಟಲ್‌ಗಳಲ್ಲಿ ದತ್ತಾಂಶವನ್ನು ದಾಖಲಿಸುವಾಗ ತಾಂತ್ರಿಕ ದೋಷಗಳಾಗದಂತೆ ನೋಡಿಕೊಳ್ಳಬೇಕು.

– ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾಧಿಕಾರಿಗಳು


ಸಾರ್ವಜನಿಕರು ನೀಡುವ ವೈಯಕ್ತಿಕ ಮತ್ತು ಸಾಮಾಜಿಕ ಮಾಹಿತಿಯ ಗೌಪ್ಯತೆಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಭರವಸೆ ನೀಡಿದ ಅವರು, ತಹಶೀಲ್ದಾರ್‌ಗಳು, ಮೇಲ್ವಿಚಾರಕರು ಮತ್ತು ಗಣತಿದಾರರು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಶಿವಮೊಗ್ಗ ತಹಶೀಲ್ದಾರ್ ರಾಜೀವ್, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ » ಜಿಲ್ಲಾಧಿಕಾರಿಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ, ಪರಿಶೀಲನೆ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...