
ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ನಾಳೆ (ಏ.11 ರಂದು) ಬೆಳಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ » ಬಂಕ್ ಮಾಲೀಕರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಎಚ್ಚರಿಕೆ, ಕಾರಣವೇನು?
ಮಲ್ಲಿಗೆ ಇಡ್ಲಿ ಸೆಂಟರ್, ಡಿ.ಸಿ.ಕಚೇರಿ ಕಾಂಪೌಂಡ್, ಆರ್.ಟಿ.ಓ. ಕಚೇರಿ, ಕೋರ್ಟ್ ರಸ್ತೆ, ವಾರ್ತಾ ಇಲಾಖೆ, ಬಾಲರಾಜ್ ಅರಸ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.