
ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ವಾರ್ಡ್ ಅನ್ನು ಸುಸಜ್ಜಿತವಾಗಿ ರೂಪಿಸುವ ಮತ್ತು ನಾಗರಿಕರಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ಸಂಕಲ್ಪದೊಂದಿಗೆ, ನಗರದ ವಿವಿಧ ಭಾಗಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸೇರಿದಂತೆ ಹಲವರು ಅಭಿವೃದ್ಧಿ ಕಾಮಗಾರಿಗಳಿಗೆ ಇಂದು (ಶುಕ್ರವಾರ) ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಇದನ್ನೂ ಓದಿ » ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗೆ ನೇರ ಸಂದರ್ಶನ, ಯಾವಾಗ, ಎಲ್ಲಿ?
ವಾರ್ಡ್ ನಂಬರ್ 5 : ಪುರಲೆ ಭಾಗದ ಅಂಬುಜ ಅಪಾರ್ಟ್‌ಮೆಂಟ್ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿ.
ವಾರ್ಡ್ ನಂಬರ್ 18 : ಆರ್.ಎಂ.ಎಲ್ ನಗರದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿ.
ಸಾರ್ವಜನಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಈ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಗಳನ್ನು ಅತ್ಯಂತ ಗುಣಮಟ್ಟದಿಂದ ಹಾಗೂ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು.
– ಎಸ್.ಎನ್.ಚನ್ನಬಸಪ್ಪ, ಶಿವಮೊಗ್ಗ ನಗರ ಶಾಸಕರು
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಮೋಹನ್ ರೆಡ್ಡಿ, ಪ್ರಮುಖರಾದ ಪೆರುಮಾಳ್, ರಮೇಶ್, ಜಗನ್ನಾಥ್, ಹರ್ಷ, ಮಲ್ಲಿಕಾರ್ಜುನ್, ಆನಂದ್, ವಾರ್ಡ್ ನ ಅಧ್ಯಕ್ಷ ರಮೇಶ್, ಕಾರ್ಯದರ್ಶಿಗಳಾದ ಶ್ರೀನಿವಾಸ್, ಸುಧೀರ ಸೇರಿದಂತೆ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ » ನಾಳೆ ನಗರದ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ