
ಶಿವಮೊಗ್ಗ : ನಗರದ ಅಣ್ಣಾನಗರ ಚಾನಲ್ ಏರಿಯಾದಲ್ಲಿ ಗಾಂಜಾವನ್ನು ಹುಲ್ಲಿನ ಬಣವೆಯಲ್ಲಿಟ್ಟು ಅಕ್ರಮವಾಗಿ ಮಾರಾಟ ಮಾಡ್ತಿದ್ದ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನ ಸೋಮವಾರ ಬಂಧಿಸಿದ್ದಾರೆ.
ಇದನ್ನೂ ಓದಿ » ಹುಲಿಕಲ್ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ತಾತ್ಕಾಲಿಕ ಬಂದ್, ಪರ್ಯಾಯ ಮಾರ್ಗ ವ್ಯವಸ್ಥೆ
ದೊಡ್ಡಪೇಟೆ ಪೊಲೀಸ್ ಠಾಣೆ ಸಿಪಿಐ ನೇತೃತ್ವದ ತಂಡ ದಾಳಿ ನಡೆಸಿ, ಚಿಕ್ಕಲ್ ಬಡಾವಣೆ ಯ ಮಹಮ್ಮದ್ ಅಂಬ್ರೋಸ್ ಎಂಬ ಆರೋಪಿಯನ್ನ ಬಂಧಿಸಿದ್ದಾರೆ. ಆರೋಪಿಯಿಂದ 85,000 ರೂ ಮೌಲ್ಯದ 1 ಕೆಜಿ 720 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.