
ಶಿವಮೊಗ್ಗ : ಶಿಕಾರಿಪುರದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ- ಹಲವರಿಗೆ ಗಾಯವಾದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಇದನ್ನೂ ಓದಿ » ಹುಲಿಕಲ್ ಘಾಟ್ ಗೆ ಸಚಿವ ಸತೀಶ್ ಜಾರಕಿಹೋಳಿ ಭೇಟಿ, ಪರಿಶೀಲನೆ
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ 7 ಜನ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಬಿ.ವೈ ವಿಜಯೇಂದ್ರ ಈ ವೇಳೆ ಮೆಗ್ಗಾನ್ ವೈದ್ಯರಿಗೆ ಸೂಚಿಸಿದ್ದಾರೆ.
ಗಾಯಾಳುಗಳ ಭೇಟಿ ನಂತರ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ನಿನ್ನೆ ಶಿಕಾರಿಪುರದಲ್ಲಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಜನ ಗಾಯವಾಗಿತ್ತು. ಸಂಸದ ರಾಘವೇಂದ್ರ ಅವರು ನಿನ್ನೆ ಭೇಟಿ ಮಾಡಿ, ಧೈರ್ಯ ಹೇಳಿದರು.
ನಾನು ಇಂದು ಬಂದು, ಧೈರ್ಯ ಹೇಳಿದ್ದೇನೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೈದ್ಯರುಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ » ಏ.15 ಮತ್ತು 16 ರಂದು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ