
ಶಿವಮೊಗ್ಗ : ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಶಿವಮೊಗ್ಗ ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ » ಮೆಗ್ಗಾನ್ ಆಸ್ಪತ್ರೆಗೆ ಶಿಕಾರಿಪುರ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ
ಎನ್ ಟಿ ರಸ್ತೆಯಲ್ಲಿನ ಹೋಟೆಲ್ ವೊಂದರ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆ ಸಿಪಿಐ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನ ಬಂಧಿಸಿದ್ದಾರೆ. ರಾಗಿಗುಡ್ಡ 33 ವರ್ಷದ ಆಸೀಫ್ ಖಾನ್ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ ಅಂದಾಜು ರೂ.70,000/- ಮೌಲ್ಯದ 1ಕೆಜಿ 400 ಗ್ರಾಂ ತೂಕದ ಗಾಂಜಾವನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 80,000 ರೂ ಮೌಲ್ಯದ ಆಟೋವನ್ನು ಪೊಲೀಸರು ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ » ಹುಲಿಕಲ್ ಘಾಟ್ ಗೆ ಸಚಿವ ಸತೀಶ್ ಜಾರಕಿಹೋಳಿ ಭೇಟಿ, ಪರಿಶೀಲನೆ