ಬಿಸಿಲಿಗೆ ಒಣಗಲು ಹಾಕಿದ್ದ ಅಡಿಕೆ ಕಳ್ಳತನ, ಇಬ್ಬರು ಆರೋಪಿಗಳ ಸೆರೆ, ನಾಲ್ಕು ಕ್ವಿಂಟಾಲ್ ಅಡಿಕೆ, ಒಂದು ಮಾರುತಿ ಕಾರು ವಶ

ಶಿಕಾರಿಪುರ : ಬಿಸಿಲಿನಲ್ಲಿ ಒಣಗಿಸಲು ಹಾಕಿದ್ದ ಅಡಿಕೆಯನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕಳುವಾಗಿದ್ದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ್ದ ಗೂಡ್ಸ್ ವಾಹನ ವಶಕ್ಕೆ ಪಡೆಯಲಾಗಿದೆ.

ಶಿಕಾರಿಪುರ ತಾಲೂಕಿನ ಹುಣಸೇಕಟ್ಟೆ ಗ್ರಾಮ ದಲ್ಲಿ ಈ ಘಟನೆ ನಡೆದಿತ್ತು. ಭುವನೇಶ್ವರ್ ಎಂಬುವ ವರು ತಮ್ಮ ಮನೆಯ ಮುಂದಿನ ಖಾಲಿ ಜಾಗದಲ್ಲಿ ಸುಮಾರು 16 ಕ್ವಿಂಟಾಲ್ ಸಿಪ್ಪೆ ಗೋಟು ಅಡಿಕೆ ಒಣಹಾಕಿದ್ದರು. ಈ ಪೈಕಿ ಸುಮಾರು 1,00,000 ರೂ. ಮೌಲ್ಯದ 4 ಕ್ವಿಂಟಾಲ್ ಅಡಿಕೆ ಯನ್ನು ಕಿಡಿಗೇಡಿಗಳು ಕಳ್ಳತನ ಮಾಡಿದ್ದರು.

ಮಾ.28 ರಂದು ಶಿರಾಳಕೊಪ್ಪ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಸಂದಬಂಧ ಜಿಲ್ಲಾ ಪೊಲೀಸ್ ಅಕ್ಷಕರಾದ ನಿಖಿಲ್.ಬಿ, ಎಎಸ್‌ಪಿ ಕಾರಿಯಪ್ಪ.ಎಂ.ಜಿ, ಶಿಕಾರಿಪುರ ಡಿವೈಎಸ್‌ಪಿ ಕೇಶವ.ಕೆ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಶಿಕಾರಿಪುರ ಇನ್ಸ್‌ಪೆಕ್ಟರ್ ಸಂತೋಷ್ ಎಂ.ಪಾಟೀಲ್, ಶಿರಾಳಕೊಪ್ಪಪಿಎಸ್‌ಐ ಪ್ರಶಾಂತ ಕುಮಾರಟಿ.ಬಿ. ನೇತೃತ್ವದ ತಂಡವು ತನಿಖೆ ನಡೆಸಿತು.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಶಿಕಾರಿಪುರ ಪಟ್ಟಣದ ಕುಂಬಾರ್ ಗುಂಡಿ ಕೊಪ್ಪಲು ನಿವಾಸಿ ಮಹಮ್ಮದ್ ಮನ್ಸೂರ್ (30) ಹಾಗೂ ಗಟ್ಟೂರು ನಿವಾಸಿ ಷಹಾದ ಉಲ್ಲಾ (35) ಅವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಬಂಧಿತರಿಂದ 10 ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿದ್ದ 4 ಕ್ವಿಂಟಾಲ್ ಸಿಪ್ಪೆ ಗೋಟು ಅಡಿಕೆ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ ರೂ.1,00,000 ಎಂದು ಅಂದಾಜಿಸಲಾಗಿದೆ. ಇನ್ನು, ಕೃತ್ಯಕ್ಕೆ ಬಳಸಿದ್ದ ಮಾರುತಿ ಸುಜುಕಿ ಸೂಪರ್ ಕ್ಯಾರಿ ಗೂಡ್ಸ್ ವಾಹನವನ್ನು ಸೀಜ್ ಮಾಡಲಾಗಿದೆ. ಇದರ ಮೌಲ್ಯ ರೂ.5,00,000 ಎಂದು ಅಂದಾಜಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಮೇ 01, 02: ನಗರದ ಹಲವೆಡೆ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ?

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...