ಉದ್ಯೋಗಾಕಾಂಕ್ಷಿಗಳಿಗೆ Good News: ಪ್ರತಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನ, ಎಲ್ಲಿ, ಯಾವಾಗ?

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಮೇ 21 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ‘ಇಸುಝ ಮೋಟರ‍್ಸ್ ಇಂಡಿಯಾ ಲಿ.,’ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

ಪಿಯುಸಿ, ಕಾಮರ್ಸ್/ಬಿಕಾಂ, ಐಟಿಐ-ಡಿಸೆಲ್ ಫಿಟ್ಟರ್ಸ್, ಡಿಪ್ಲೊಮಾ ಇನ್ ಮೆಕಾನಿಕಲ್ ಇಂಜಿನಿಯರಿಂಗ್ ಪೂರೈಸಿದ, 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

ಇದನ್ನೂ ಓದಿ » ಸಹಕಾರ ಕ್ಷೇತ್ರದಲ್ಲಿ ಪಾರದರ್ಶಕತೆ ಅಗತ್ಯ : ಬಿ.ಎಸ್.ಯಡಿಯೂರಪ್ಪ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...