ಮುಖ್ಯರಸ್ತೆಗೆ ಮಾವಿನ ಹಣ್ಣು ಸುರಿದು ವ್ಯಾಪಾರಿಯ ಆಕ್ರೋಶ

ಶಿವಮೊಗ್ಗ : ರಸ್ತೆ ಒತ್ತುವರಿ ಮಾಡಿಕೊಂಡಿದ್ದ ವ್ಯಾಪಾರಿಗಳನ್ನು ತೆರವು ಮಾಡುವಾಗ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಮುಖ್ಯ ರಸ್ತೆಯಲ್ಲಿ ಹೈಡ್ರಾಮಾ ನಡೆದಿದೆ. ವ್ಯಾಪಾರಿಯೊಬ್ಬ ಮಾವಿನ ಹಣ್ಣುಗಳನ್ನೆಲ್ಲ ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪಟ್ಟಣದಲ್ಲಿ ಕೆಲವರು ಮುಖ್ಯರಸ್ತೆಯ ಮೇಲೆಯೇ ವ್ಯಾಪಾರ ನಡೆಸುತ್ತಿದ್ದರು. ರಸ್ತೆ ಬಿಟ್ಟು ವ್ಯಾಪಾರ ನಡೆಸುವಂತೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ವ್ಯಾಪಾರಿಗಳಿಗೆ ಸೂಚಿಸಿದರು. ಇಂದು ತೆರವು ಕಾರ್ಯಾಚರಣೆ ನಡೆಸಿದರು. ಈ ವೇಳೆ ವ್ಯಾಪಾರಿಯೊಬ್ಬ ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವ್ಯಾಪಾರಿಯೊಬ್ಬರು ಬುಟ್ಟಿಗಳಲ್ಲಿದ್ದ ಮಾವಿನ ಹಣ್ಣುಗಳನ್ನು ರಸ್ತೆಗೆ ಸುರಿದಿದ್ದಾರೆ. ಅಲ್ಲದೆ ಪಟ್ಟಣ ಪಂಚಾಯಿತಿ ಅಧಿಕಾರಿಗಳ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ಮಾವಿನ ಹಣ್ಣುಗಳನ್ನು ರಸ್ತೆಯಿಂದ ತೆರವುಗೊಳಿಸಿದರು. ಇದರಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ » ಉದ್ಯೋಗಾಕಾಂಕ್ಷಿಗಳಿಗೆ Good News: ಪ್ರತಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನ, ಎಲ್ಲಿ, ಯಾವಾಗ?

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...