ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ: ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : 2026-27ನೇ ಸಾಲಿನ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ ಜಿಲ್ಲೆ ಇಲ್ಲಿ ಎಸ್ ಎಸ್ ಎಲ್ ಸಿ ಪಾಸಾದ ವಿದ್ಯಾರ್ಥಿಗಳಿಗೆ 3 ವರ್ಷದ ಡಿಪ್ಲೋಮಾ ಕೋರ್ಸ್ ಹಾಗೂ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮುಖಾಂತರ 2 ವರ್ಷದ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಈ ಸಾಲಿನಲ್ಲಿ ಒಟ್ಟು 39 ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ಹಣ ಪಾವತಿಸುವ ಆಧಾರದ ಮೇಲೆ ವಸತಿ ನಿಲಯದ ಸೌಲಭ್ಯವನ್ನು ಕಲ್ಪಿಸಲಾಗುವುದು.

ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು. ದಿನಾಂಕ : 01.07.2026 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 15 ರಿಂದ 23 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15 ರಿಂದ 25 ವರ್ಷಗಳ ವಯೋಮಿತಿ ಇರಬೇಕು.

ಲಭ್ಯವಿರುವ ಸಂಸ್ಥೆಗಳು ಮತ್ತು ಸೀಟುಗಳ ವಿವರ :

  • ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) – 22 ಸೀಟುಗಳು.
  • ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) – 12 ಸೀಟುಗಳು.
  • ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ಆಂಧ್ರಪ್ರದೇಶ) – 03 ಸೀಟುಗಳು.
  • ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) – 02 ಸೀಟುಗಳು ಸೇರಿ ಒಟ್ಟು 39 ಸೀಟುಗಳು ಲಭ್ಯವಿರುತ್ತವೆ.

ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಫಾರಂಗಳನ್ನು ವೆಬ್‌ಸೈಟ್ https://khtigadag.ac.in/AdmissionForm.pdf ನಿಂದ ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: 30.05.2026 ರೊಳಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-582102 ಇವರಿಗೆ ಸಲ್ಲಿಸಬೇಕಾಗಿರುತ್ತದೆ.

ಹೆಚ್ಚಿನ ವಿವರಗಳಿಗಾಗಿ ಗದಗ ಸಂಸ್ಥೆಯ ದೂರವಾಣಿ ಸಂಖ್ಯೆ: 9449162822 ಅಥವಾ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಶಿವಮೊಗ್ಗ , ದೂರವಾಣಿ ಸಂಖ್ಯೆ: 01812-223405 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಜೂ.01 ರಂದು ಸಿ.ಎಂ. ಸಿದ್ಧರಾಮಯ್ಯ ಅವರು ಶಿವಮೊಗ್ಗಕ್ಕೆ, ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ? ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಮಾಹಿತಿ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...