ಮಂಗಳವಾರವೂ ಹುಲಿ-ಸಿಂಹಧಾಮ ವೀಕ್ಷಣೆಗೆ ಅವಕಾಶ

ಶಿವಮೊಗ್ಗ : ತ್ಯಾವರೆಕೊಪ್ಪದ ಹುಲಿ-ಸಿಂಹ ಧಾಮದಲ್ಲಿ ಸಾಮಾನ್ಯವಾಗಿ ಪ್ರತಿ ಮಂಗಳವಾರ ವಾರದ ರಜೆಯಾಗಿದ್ದು, ಆ ದಿನ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶವಿರುವುದಿಲ್ಲ. ಆದರೆ, ಪ್ರಸ್ತುತ ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೃಗಾಲಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ, ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ವಿಶೇಷವಾಗಿ ದಿನಾಂಕ: 26.05.2026ರ ಮಂಗಳವಾರದಂದು ಹುಲಿ-ಸಿಂಹ ಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ತೆರೆದಿರುತ್ತದೆ.

ಇದನ್ನೂ ಓದಿ » ಸಕ್ರೆಬೈಲು ಆನೆ ಬಿಡಾರಕ್ಕೆ ಸಾರ್ವಜನಿಕರ ಪ್ರವೇಶ ತಾತ್ಕಾಲಿಕ ಬಂದ್: ಅರಣ್ಯ ಇಲಾಖೆ ಆದೇಶ

ಸಾರ್ವಜನಿಕರು ಹಾಗೂ ಪ್ರವಾಸಿಗರು ಈ ವಿಶೇಷ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಹುಲಿ-ಸಿಂಹ ಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...