ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜಿಲ್ಲೆಯಲ್ಲಿ ಉದ್ಯೋಗ ಮೇಳ, ನೇರ ಸಂದರ್ಶನದ ಮೂಲಕ ಆಯ್ಕೆ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ.05 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ಎನ್‌ಐಡಿಇಸಿ ಇಂಡಸ್ಟ್ರೀಯಲ್ ಆಟೋ ಮಷಿನ್ ಇಂಡಿಯಾ ಪ್ರೈ.ಲಿ. ಮತ್ತು ಎನ್‌ಟಿಟಿಎಫ್ ಪ್ರೈ.ಲಿ. ಕಂಪನಿಗಳು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಎಲೆಕ್ಟ್ರಿಕಲ್ & ಎಲೆಕ್ಟ್ರಿಷಿಯನ್, ಎಲೆಕ್ಟ್ರೋ & ಮೆಕಾನಿಕಲ್, ಮೆಕಾನಿಕಲ್, ಫಿಟ್ಟರ್, ಟರ್ನರ್, ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ & ಕಮ್ಯೂನಿಕೇಷನ್ ಪದವಿ ಪೂರೈಸಿದ, 18 ರಿಂದ 24 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

ಇದನ್ನೂ ಓದಿ » ‘ಗೋ ಸೇವಾ ಮಾಸ ಅಭಿಯಾನ’ಕ್ಕೆ ಇಂದು ಚಾಲನೆ, ಒಂದು ತಿಂಗಳ ಅಭಿಯಾನ ಕಾರ್ಯಕ್ರಮ, ಹೇಗೆಲ್ಲ ನಡೆಯಲಿದೆ?

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...