ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ ಅಲಿಯಾಸ್ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ.

ಭೀಕರ ದಾಳಿಯಲ್ಲಿ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

ಇದನ್ನೂ ಓದಿ » ಜಮೀರ್ ಅಹಮದ್ ಗೆ ಡಿಸಿಎಂ ಸ್ಥಾನಕ್ಕಾಗಿ ಮುಸ್ಲಿಂ ಸಮುದಾಯ ಪ್ರತಿಭಟನೆ, ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ!

ಮೂಲಗಳ ಪ್ರಕಾರ, ವಿಶ್ವನಾಥ್ ಮೇಲೆ ಸುಮಾರು 6 ರಿಂದ 7 ಮಂದಿಯ ತಂಡ ಏಕಾಏಕಿ ದಾಳಿ ನಡೆಸಿದ್ದು, ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿದೆ ಎನ್ನಲಾಗಿದೆ. ದಾಳಿಕೋರರು ವಿಶ್ವನಾಥ್ ಅವರನ್ನು ಬೆನ್ನಟ್ಟಿ ಹಿಡಿದು ತಲ್ವಾರ್ ಹಾಗೂ ಇತರೆ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಿಂದ ತೀವ್ರ ರಕ್ತಸ್ರಾವಗೊಂಡ ವಿಶ್ವನಾಥ್ ಅವರನ್ನು ಸ್ಥಳೀಯರು ಮತ್ತು ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯರು ಅವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.

ವಿಶ್ವನಾಥ್ ಭದ್ರಾವತಿ ಪ್ರದೇಶದಲ್ಲಿ ಇಸ್ಪೀಟ್ ಕಿಂಗ್ ಎಂದೇ ಪರಿಚಿತರಾಗಿದ್ದು, ಇಸ್ಪೀಟ್ ಮತ್ತು ಇತರೆ ವಿಚಾರಗಳಿಗೆ ಸಂಬಂಧಿಸಿದ ವೈಷಮ್ಯವೇ ದಾಳಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಘಟನೆ ಕುರಿತು ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ » ನಗರದಾದ್ಯಂತ ಶಾಲಾ, ಕಾಲೇಜು ವಾಹನಗಳ ದಿಢೀರ್‌ ತಪಾಸಣೆ, ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಚಾಲಕರ ವಿರುದ್ಧ ಕೇಸ್

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...