
ಶಿವಮೊಗ್ಗ : ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮತ್ತು ಜಿಲ್ಲೆಯಲ್ಲಿ ಬೆಳೆ ವಿಮಾ ಪರಿಹಾರದ ವೈಪರೀತ್ಯಗಳನ್ನು ಸರಿಪಡಿಸಿ ಸಂತ್ರಸ್ತ ರೈತರಿಗೆ ತಕ್ಷಣ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ಜನಪ್ರತಿನಿಧಿಗಳು ಹಾಗೂ ಶಾಸಕರ ನಿಯೋಗ ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗವು, ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠದ ಬೇಡಿಕೆಗೆ ವ್ಯಕ್ತವಾಗುತ್ತಿರುವ ಸಾರ್ವಜನಿಕರ ತೀವ್ರ ಜನಾಗ್ರಹವನ್ನು ಮುಖ್ಯ ಮಂತ್ರಿಗಳ ಗಮನಕ್ಕೆ ತಂದಿತು.
ನಿಯೋಗದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಬೇಳೂರು ಗೋಪಾಲಕೃಷ್ಣ, ಡಾ. ಧನಂಜಯ್ ಸರ್ಜಿ, ಅರುಣ್ ಡಿ.ಎಸ್. ಶಿವಮೊಗ್ಗ ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ, ಸಾಗರ ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಗಿರೀಶ್ ಗೌಡ, ಶಿಕಾರಿಪುರ ವಕೀಲರ ಸಂಘದ ಅಧ್ಯಕ್ಷ ಎಂ.ಜಿ. ಉಮೇಶ್ ಮತ್ತು ಶಿವಮೊಗ್ಗ ಜಿಲ್ಲೆಯ ಹಿರಿಯ ವಕೀಲರು ಹಾಗೂ ವಕೀಲರ ಸಂಘಗಳ ಸದಸ್ಯರು ಭಾಗವಹಿಸಿದ್ದರು.
ಇದನ್ನೂ ಓದಿ » ನೇಕಾರರ ಸಮ್ಮಾನ್ ಯೋಜನೆ: ಜಿಲ್ಲೆಯ ಅರ್ಹ ನೇಕಾರರಿಂದ ಆರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ