ಕುಡಿಯುವ ನೀರಿನ ಸಮರ್ಪಕ ನಿರ್ವಹಣೆ, ಚಾನಲ್ ಸ್ವಚ್ಛತೆ ಕುರಿತು ಅಗತ್ಯ ಕ್ರಮಕ್ಕೆ ಶಾಸಕ ಎಸ್.ಎನ್.ಚನ್ನಬಸಪ್ಪ ಅಧಿಕಾರಿಗಳಿಗೆ ಸೂಚನೆ

ಶಿವಮೊಗ್ಗ : ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಬರದೇ ಇರುವುದರಿಂದ ಭವಿಷ್ಯದಲ್ಲಿ ಶಿವಮೊಗ್ಗ ನಗರದ ಜನತೆಗೆ ಕುಡಿಯುವ ನೀರಿನ ಯಾವುದೇ ತೊಂದರೆಯಾಗದಂತೆ ತಕ್ಷಣದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಮತ್ತು ನಗರದ ಜಲಮೂಲಗಳಾದ ಚಾನಲ್‌ಗಳನ್ನು ಸ್ವಚ್ಛವಾಗಿಡುವುದು ಇಲಾಖೆಗಳ ಜವಾಬ್ದಾರಿಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ಹೇಳಿದರು.

ಇದನ್ನೂ ಓದಿ » ಸಚಿವ ಸ್ಥಾನ ನೀಡುವುದು, ಬಿಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಷಯ:ಮಧು ಬಂಗಾರಪ್ಪ

ಇಂದು ಶಾಸಕರ ಅಧಿಕೃತ ಕಚೇರಿಯಾದ ಕರ್ತವ್ಯ ಭವನದಲ್ಲಿ ಮಹಾನಗರ ಪಾಲಿಕೆ ಹಾಗೂ ತುಂಗಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳೊಂದಿಗೆ ಆಯೋಜಿಸಲಾಗಿದ್ದ ಜಂಟಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

  1. ಮಹಾನಗರ ಪಾಲಿಕೆ ಹಾಗೂ ತುಂಗಾ ಮೇಲ್ದಂಡೆ ಯೋಜನಾ ಮಂಡಳಿಯ ನಡುವೆ ಸಮನ್ವಯತೆಯ ಕೊರತೆಯಿಂದ ಸಾರ್ವಜನಿಕ ಕಾಮಗಾರಿಗಳಿಗೆ ಅಡ್ಡಿಯಾಗಬಾರದು. ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
  2. ನಗರದ ವ್ಯಾಪ್ತಿಯಲ್ಲಿ ಹಾದುಹೋಗುವ ಚಾನೆಲ್‌ಗಳ ಅಭಿವೃದ್ಧಿ ಹಾಗೂ ಅವುಗಳ ನಿರಂತರ ಸ್ವಚ್ಛತೆಯ ಕುರಿತು ಸಭೆಯಲ್ಲಿ ಚರ್ಚೆ ನಡೆಸಿ, ಅಗತ್ಯ ಕ್ರಮಗಳಿಗೆ ಸೂಚಿಸಲಾಯಿತು.
  3. ಜಲಾಶಯದಲ್ಲಿ ಸದ್ಯ ಲಭ್ಯವಿರುವ ನೀರಿನ ಪ್ರಮಾಣ ಹಾಗೂ ನಗರದ ದೈನಂದಿನ ಪೂರೈಕೆಯ ಸ್ಥಿತಿಗತಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಮಳೆಯ ಕೊರತೆಯಿರುವುದರಿಂದ ಮುಂದಿನ ದಿನಗಳಲ್ಲಿ ಉದ್ಭವಿಸಬಹುದಾದ ಜಲಕ್ಷಾಮವನ್ನು ಎದುರಿಸಲು ಈಗಿನಿಂದಲೇ ವೈಜ್ಞಾನಿಕ ನೀರಿನ ಪೂರೈಕೆ ಯೋಜನೆ ಹಾಗೂ ತುರ್ತು ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲು ಪಾಲಿಕೆ ಆಯುಕ್ತರಿಗೆ ಆದೇಶಿಸಿದರು.

ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರು, ಮುಖ್ಯ ಇಂಜಿನಿಯರ್‌ಗಳು, ತುಂಗಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ » ನಂಬರ್ ಪ್ಲೇಟ್ ಇಲ್ಲದ, ಡಿಫೆಕ್ಟಿವ್ ವಾಹನಗಳಿಗೆ ದಂಡ, ಇನ್ಮುಂದೆ ನೋ ವಾರ್ನಿಂಗ್, ಡೈರೆಕ್ಟ್ ಎಫ್ಐಆರ್: ಎಸ್ಪಿ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...