ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪರಿಸರ ಸ್ನೇಹಿ: ಕೆ.ಜೆ.ಜಾರ್ಜ್

ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲಾಗುತ್ತಿದೆ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪರಿಸರ ಸ್ನೇಹಿಯಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಇದನ್ನೂ ಓದಿ » ಎಸ್‌ಐಆರ್ ಕುರಿತು ಆತಂಕ ಬೇಡ, ಜನರಿಗೆ ಸ್ಪಷ್ಟ ಮಾಹಿತಿ ನೀಡಬೇಕು: ಕೆ.ಜೆ.ಜಾರ್ಜ್

ಶರಾವತಿ ಜಲಾಶಯ ನಿರ್ಮಾಣದ ಸಂದರ್ಭದಲ್ಲೂ ಸಾವಿರಾರು ಎಕರೆ ಭೂಮಿ ಮುಳುಗಡೆಯಾಗಿದ್ದರೂ ಸೀಮಿತ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ನಡೆಯುತ್ತಿದೆ. ಆದರೆ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಕಡಿಮೆ ಭೂಮಿ ಬಳಕೆಯಲ್ಲೇ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ.

ಕೆ.ಜೆ.ಜಾರ್ಜ್, ಇಂಧನ ಸಚಿವರು


ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಯೋಜನೆಗೆ ಸುಮಾರು 125 ಎಕರೆ ಭೂಮಿ ಅಗತ್ಯವಿದ್ದು, ಪೈಪ್‌ಲೈನ್ ಅಳವಡಿಕೆ ಬಳಿಕ ಆ ಪ್ರದೇಶದಲ್ಲಿ ಪುನಃ ಹಸಿರು ವಾತಾವರಣ ನಿರ್ಮಿಸಲಾಗುತ್ತದೆ. ಯೋಜನೆಯಿಂದ ಪರಿಸರಕ್ಕೆ ಹಾನಿಯಾಗುವುದಿಲ್ಲ ಹಾಗೂ ಅಗತ್ಯವಿರುವ ಎಲ್ಲ ಅನುಮತಿಗಳನ್ನು ಪಡೆದ ನಂತರವೇ ಜಾರಿಗೆ ತರಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಮಲೆನಾಡಿನಲ್ಲಿ ಈ ಬಾರಿ ಮುಂಗಾರು ಕೊರತೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇನ್ನೂ ಮಳೆಗಾಲದ ಅವಧಿ ಉಳಿದಿದ್ದು ಮಳೆಯ ಬಗ್ಗೆ ಆಶಾವಾದವಿದೆ ಎಂದರು. ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಇದನ್ನೂ ಓದಿ » ಕಿರಣ ಕೇಂದ್ರ ವಿದ್ಯಾಲಯ ಶಾಲೆಯಲ್ಲಿ ವಿವಿಧ ಶೈಕ್ಷಣಿಕ ಕ್ಲಬ್ ಗಳ ಕಾರ್ಯಕ್ರಮಕ್ಕೆ ಚಾಲನೆ 

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...