5 ರಿಂದ 8 ವರ್ಷದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2026-27ನೇ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಲು 5 ರಿಂದ 18 ವರ್ಷದೊಳಗಿನ ಅರ್ಹ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ » ಎಸ್‌ಐಆರ್ ಕುರಿತು ಆತಂಕ ಬೇಡ, ಜನರಿಗೆ ಸ್ಪಷ್ಟ ಮಾಹಿತಿ ನೀಡಬೇಕು: ಕೆ.ಜೆ.ಜಾರ್ಜ್

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು :

  • ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಸೂಚಿತ ಕ್ಷೇತ್ರಗಳಲ್ಲಿ ಅಪ್ರತಿಮ ಪ್ರತಿಭೆ ಉಳ್ಳವರಾಗಿದ್ದು, ಅವರು ಸಾಧಿಸಿದ ಪ್ರತಿಭೆಯ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿರಬೇಕು.
  • ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಮಕ್ಕಳು ಕನಿಷ್ಠ 5 ವರ್ಷ ಕರ್ನಾಟಕ ರಾಜ್ಯದಲ್ಲಿ ವಾಸಿಸಿರಬೇಕು.
  • ಈ ಬಗ್ಗೆ ಸ್ವಯಂ ದೃಢೀಕರಣ ಪತ್ರ ಸಲ್ಲಿಸುವುದು.
  • ರಾಷ್ಟ್ರ, ರಾಜ್ಯ, ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿರುವ ಪ್ರಶಸ್ತಿ ಪಡೆದಿರುವ ಮಾಹಿತಿಯನ್ನು ಸಲ್ಲಿಸುವುದು.
  • ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಪುನಃ ಪ್ರಶಸ್ತಿ ನೀಡಲು ಅವಕಾಶವಿರುವುದಿಲ್ಲ.
  • ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.
  • ಪ್ರತಿ ಕ್ಷೇತ್ರಕ್ಕೆ ಇಬ್ಬರು ಮಕ್ಕಳಂತೆ ಒಟ್ಟು 8 ಮಕ್ಕಳಿಗೆ ರೂ.10,000/ಗಳ ನಗದು ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜು.27 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿ ದೂರವಾಣಿ ಸಂಖ್ಯೆ.: 08182-295514 ನ್ನು ಸಂಪರ್ಕಿಸುವುದು.

ಇದನ್ನೂ ಓದಿ » ಶಿಕಾರಿಪುರದಲ್ಲಿ ಗಾಂಜಾ ಮಾರಾಟ, 113 ಗ್ರಾಂ ಗಾಂಜಾ ವಶ, ಆರೋಪಿ ಬಂಧನ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...