ನಗರದ ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸುವಂತೆ ಶಾಸಕರ ಖಡಕ್ ಸೂಚನೆ 

ಶಿವಮೊಗ್ಗ : ಕ್ಷೇತ್ರದ ಸಾರ್ವಜನಿಕರ ದೈನಂದಿನ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಬಡಾವಣೆಗಳಲ್ಲಿ ನೈರ್ಮಲ್ಯ ಕಾಪಾಡುವುದು ಹಾಗೂ ಮೂಲಸೌಕರ್ಯಗಳ ಕೊರತೆಯನ್ನು ಆದಷ್ಟು ಬೇಗ ನಿವಾರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ತಿಳಿಸಿದರು.

ಇದನ್ನೂ ಓದಿ » 5 ರಿಂದ 8 ವರ್ಷದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಇಂದು ಶಿವಮೊಗ್ಗ ನಗರದ ಶಾಂತಿನಗರ ಬಡಾವಣೆಯಲ್ಲಿ ಒಳಚರಂಡಿ (UGD) ವ್ಯವಸ್ಥೆ ಹದಗೆಟ್ಟು ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಜಾಗಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಡಾವಣೆಯ ರಸ್ತೆಗಳಲ್ಲಿ ಯುಜಿಡಿ ನೀರು ಹರಿಯುತ್ತಿರುವುದರಿಂದ ದುರ್ವಾಸನೆ ಹರಡಿ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ ಎಂದು ಸ್ಥಳೀಯ ನಿವಾಸಿಗಳು ಹಾಗೂ ಮಾಧ್ಯಮ ಮಿತ್ರರಿಂದ ದೂರು ಬಂದ ಹಿನ್ನೆಲೆಯಲ್ಲಿ, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಪರಿಸ್ಥಿತಿಯ ಗಾಂಭೀರ್ಯತೆಯನ್ನು ಮನಗೊಂಡು ಸ್ಥಳಕ್ಕೆ ಭೇಟಿ ನೀಡಿ, ಸ್ಥಳದಲ್ಲೇ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳೊಂದಿಗೆ ಚರ್ಚಿಸಿ, ತಕ್ಷಣವೇ ಬ್ಲಾಕೇಜ್‌ಗಳನ್ನು ತೆರವುಗೊಳಿಸುವಂತೆ ಮತ್ತು ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ » ನಗರದ ಬಸ್‌ ನಿಲ್ದಾಣದಲ್ಲಿ ಅಧಿಕಾರಿಗಳ ದಿಢೀರ್‌ ದಾಳಿ, 51 ಪ್ರಕರಣ ದಾಖಲು

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...