
ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ಪಂ. ವರ್ಗಕ್ಕೆ ಸೇರಿದ ಸಾಮಾನ್ಯ ಪದವಿ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ » ನಗರದ ಈ ಭಾಗಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
ಅರ್ಜಿಯನ್ನು ಸಲ್ಲಿಸಲು ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ. ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ರೂ.2.50 ಲಕ್ಷಕ್ಕಿಂತ ಮೀರಿರಬಾರದು. ಪ್ರವರ್ಗ-2ಎ, 2ಬಿ, 3ಎ, 3ಬಿ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ರೂ.1.00 ಲಕ್ಷ ಮೀರಬಾರದು.
ಆಸಕ್ತರು ಅರ್ಜಿಯನ್ನು https://shp.karnataka.gov.in/bcwd ಮೂಲಕ ಜು.20 ರೊಳಗಾಗಿ ಸಲ್ಲಿಸುವುದು. ತಾಲೂಕುವಾರು ವಿದ್ಯಾರ್ಥಿನಿಲಯದ ವಿವರ ಹಾಗೂ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರಿ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ ವಿಳಾಸ : https://bcwd.karnataka.gov.in ನ್ನು ಸಂಪರ್ಕಿಸುವುದು.
ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bcwdhelpline@gmail.com ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.8050770004 ನ್ನು ಸಂಪರ್ಕಿಸುವುದು.