
ಶಿವಮೊಗ್ಗ : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಅನುಷ್ಠಾನಗೊಳಿಸುವ ಭಾಗವಾಗಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯು ದಿ:26-12-2023 ರಂದು ಆರಂಭವಾಗಿದ್ದು, ಜಿಲ್ಲೆಯ ಫಲಾನುಭವಿಗಳು ತ್ರೈಮಾಸಿಕ ಬದಲಾಗಿ ಪ್ರತಿ ತಿಂಗಳು 25 ರೊಳಗೆ ಕಡ್ಡಾಯವಾಗಿ ಆನ್ ಲೈನ್ ಪೋರ್ಟಲ್‌ನಲ್ಲಿ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ನೀಡದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ.
ಇದನ್ನೂ ಓದಿ » ಎಸ್.ಸಿ./ಎಸ್.ಟಿ. ಪಡಿತರ ಚೀಟಿದಾರರಿಗೆ ಕ್ಯಾಸ್ಟ್ ಮ್ಯಾಪಿಂಗ್ ಮಾಡಿಸಲು ಸೂಚನೆ
2025 ರಲ್ಲಿ ಪದವಿ/ಡಿಪ್ಲೋಮೋ ಪಡೆದ ಪದವೀಧರರು, ಪದವಿ ಪಡೆದು 6 ತಿಂಗಳಾದರೂ ಉದ್ಯೋಗ ಪಡೆಯದ ನಿರುದ್ಯೋಗಿಗಳು, ಸೇವಾ ಸಿಂಧು ಪೋರ್ಟಲ್‌ಗೆ ಬೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ಪದವೀಧರರಿಗೆ ರೂ.3,000/- ಹಾಗೂ ಡಿಪ್ಲೋಮೋ ಪದವೀಧರರಿಗೆ ರೂ.1,500/- ನೀಡಲಾಗುವುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಅರ್ಹ ಮತದಾರರು ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಿ: ಪ್ರಭುಲಿಂಗ ಕವಳಿಕಟ್ಟಿ