
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪುನರ್ವಸು ಮಳೆ ಮುಂದುವರಿಯುವ ಲಕ್ಷಣ ತೋರಿದ್ದು, ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ 4 ತಾಲೂಕುಗಳಲ್ಲಿ ಇಂದು (ಜುಲೈ 8 ರಂದು) ರಜೆ ಘೋಷಣೆ ಮಾಡಿ ಆಯಾ ತಹಾಶೀಲ್ದಾರ್‌ಗಳು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ » ವಿದ್ಯಾರ್ಥಿ ವೇತನ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನ
ನಿರಂತರ ಮಳೆಯ ಕಾರಣದಿಂದ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಸೊರಬ, ಹೊಸನಗರ ತಾಲೂಕಿನ ಅಂಗನವಾಡಿ, ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.