
ಶಿವಮೊಗ್ಗ : ಭದ್ರಾವತಿ ತೋಟಗಾರಿಕೆ ಇಲಾಖೆಯು 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ » ಸಾಗರದಲ್ಲಿ ಕಂಟ್ರೋಲ್ ರೂಂ ಶುರು, ಮಳೆ ಹಾನಿ ಪ್ರದೇಶಗಳಿಗೆ ತಹಶೀಲ್ದಾರ್ ಭೇಟಿ, ಅಧಿಕಾರಿಗಳಿಗೆ ಪ್ರಮುಖ ಸೂಚನೆ
ಫಸಲು ಕೊಡುತ್ತಿರುವ ಅಡಿಕೆ, ಮಾವು, ಕಾಳುಮೆಣಸು ಮತ್ತು ನಾಟಿ ಮಾಡಿರುವಂತಹ ಶುಂಠಿ ಬೆಳೆಗಳಿಗೆ ರೈತರು ವಿಮೆ ಮಾಡಿಸಬಹುದಾಗಿದ್ದು, ಆಸಕ್ತ ರೈತರು ನಿಗದಿತ ನಮೂನೆ ಅರ್ಜಿಯನ್ನು ಹತ್ತಿರದ ರೈತ ಸಂಪರ್ಕ ಕೇಂದ್ರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಪಾಸ್ಬುಕ್ ಪ್ರತಿ, ಆಧಾರ್ ಕಾರ್ಡ್, ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಅಥವಾ ಬ್ಯಾಂಕುಗಳಲ್ಲಿ ಜು. 31 ರೊಳಗೆ ವಿಮೆ ಕಂತನ್ನು ಪಾವತಿಸುವುದು.
ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು. ಕಸಬಾ-1 -9591134415, ಕಸಬಾ -2 – 8317333375, ಕೂಡ್ಲಿಗೆರೆ-7975537143, ಹೊಳೆಹೊನ್ನೂರು-1 – 8317404476, ಹೊಳೆಹೊನ್ನೂರು-2 – 9591134415, ಹೊಳೆಹೊನ್ನೂರು-3 -8317404476 ಗಳನ್ನು ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ » ಮಳೆ ಅವಾಂತರ, ನ್ಯೂ ಮಂಡ್ಲಿಯಲ್ಲಿನ ಮನೆ ಕುಸಿದ ಸ್ಥಳಕ್ಕೆ ಶಾಸಕ ಎಸ್.ಎನ್.ಚನ್ನಬಸಪ್ಪ ಭೇಟಿ, ಪರಿಶೀಲನೆ