
ಶಿವಮೊಗ್ಗ : ನಗರದಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಜಿಲ್ಲಾ ಸಭಾಂಗಣದಲ್ಲಿ ಶಿವಮೊಗ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್ ಅವರ ನೇತೃತ್ವದಲ್ಲಿ ಸಿಟಿ ಬಸ್ ಮಾಲೀಕರು, ಚಾಲಕರು ಮತ್ತು ನಿರ್ವಾಹಕರ ವಿಶೇಷ ಸಭೆ ನಡೆಸಲಾಯಿತು.
ಸಭೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಪ್ರಮುಖ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಯಿತು.
ಎಲ್ಲಾ ಸಿಟಿ ಬಸ್‌ಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು.ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ನಿಗದಿತ ಬಸ್ ನಿಲ್ದಾಣಗಳಲ್ಲೇ ಪ್ರಯಾಣಿಕರನ್ನು ಹತ್ತಿಸಬೇಕು/ಇಳಿಸಬೇಕು.
ಅನುಚಿತ ವರ್ತನೆ, ಚಾಲನೆ ವೇಳೆ ಮೊಬೈಲ್ ಬಳಕೆ ಹಾಗೂ ಅಸಭ್ಯ ಹಾಡುಗಳ ಪ್ರಸಾರದ ವಿರುದ್ಧ ಸಾರ್ವಜನಿಕರು ತಕ್ಷಣ ದೂರು ನೀಡಲು ಅನುವಾಗುವಂತೆ, “Public Eye”, ಸಂಚಾರ ಪೊಲೀಸ್ ಸಹಾಯವಾಣಿ ಮತ್ತು ತುರ್ತು ಸಂಖ್ಯೆ 112 ಒಳಗೊಂಡ ಜಾಗೃತಿ ಪೋಸ್ಟರ್‌ಗಳನ್ನು ಬಸ್‌ಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಲು ಸೂಚನೆ ನೀಡಿದರು.
ಸಾರ್ವಜನಿಕರ ಸುರಕ್ಷತೆಯೇ ನಮ್ಮ ಆದ್ಯತೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.
ಇನ್ನು ಸಭೆಯಲ್ಲಿ ಸಂಚಾರ ಪೊಲೀಸ್ ಇನ್ಸ್ ಪೆಕ್ಟರ್ ದೇವರಾಜ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.