ಎಪಿಎಂಸಿ ಎರಡನೇ ಅತಿ ಹೆಚ್ಚು ವಹಿವಾಟು ಕೇಂದ್ರ-ಜಿಲ್ಲೆಗೆ ಕಿರೀಟಪ್ರಾಯ

ಶಿವಮೊಗ್ಗ : ಕೃಷಿ ಮಾರಾಟ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ 2019-20 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿ ಶಿವಮೊಗ್ಗ ನಗರದ ಎಪಿಎಂಸಿ ಪ್ರಾಂಗಣದಲ್ಲಿ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣವನ್ನು ಬುಧವಾರದಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ನಮ್ಮ ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ರೈತರಿಗೆ ಉತ್ತಮ ಸಹಕಾರ ಮತ್ತು ಸೌಲಭ್ಯಗಳನ್ನು ನೀಡಿದಲ್ಲಿ ದೇಶದ ಅಭಿವೃದ್ದಿ ಸಹ ಉತ್ತಮವಾಗಿ ಆಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಪಿಎಂಸಿ ರೈತರಿಗೆ ಸಹಕಾರಿಯಾಗಿದ್ದು, ಉತ್ತಮ ವಹಿವಾಟು ಮೂಲಕ ಜಿಲ್ಲೆಗೆ ಕಿರೀಟಪ್ರಾಯವಾಗಿದೆ ಎಂದು ತಿಳಿಸಿದರು.

ಶಿವಮೊಗ್ಗದ ಎಪಿಎಂಸಿ ರಾಜ್ಯದಲ್ಲೇ ಎರಡನೇ ಅತಿ ಹೆಚ್ಚು ವಹಿವಾಟು ನಡೆಸುವ ಕೇಂದ್ರವಾಗಿರುವುದು ಹೆಮ್ಮೆಯ ವಿಷಯ. ರೈತರನ್ನು ಯಾರೂ ಕಡೆಗಣಿಸಬಾರದು. ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರು 35 ವರ್ಷಗಳ ಹಿಂದೆ ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಯೋಜನೆ ನೀಡಿದಾಗ ಸಾಕಷ್ಟು ಟೀಕೆಗಳು ಬಂದವು. ಆದರೆ ಇದೇ ಯೋಜನೆಯ ಫಲವಾಗಿ ಇಂದು ರೈತರು ಅಭಿವೃದ್ದಿಯಾಗಿದ್ದು ಆರ್ಥಿಕತೆಗೆ ಉತ್ತಮ ಕೊಡುಗೆ ನೀಡುತ್ತಿದ್ದಾರೆ.

ರೈತರ ಚಟುವಟಿಕೆಗಳಿಂದಾಗಿ ಎಪಿಎಂಸಿ, ಮ್ಯಾಮ್‌ಕೋಸ್, ಹಾಪ್‌ಕಾಮ್ಸ್, ಇತರೆ ಕೃಷಿ ಮತ್ತು ತೋಟಗಾರಿಕೆ ಮಾರುಕಟ್ಟೆಗಳಲ್ಲಿ ಉತ್ತಮ ವಹಿವಾಟು, ಆದಾಯ ಸಾಧ್ಯವಾಗುತ್ತಿದೆ. ಶಿವಮೊಗ್ಗ ಎಪಿಎಂಸಿ ಯಲ್ಲಿ ರೂ.2475 ಕೋಟಿ ವ್ಯವಹಾರ ನಡೆಯುತ್ತಿದ್ದು, ರೂ.250 ಕೋಟಿ ಜಿಎಸ್‌ಟಿ ಪಾವತಿ ಮಾಡುತ್ತಿದೆ. ರೈತರ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿ ಮಳಿಗೆಗಳ ಅವಶ್ಯಕತೆ ಇದ್ದು, ಹೀಗೆಯೇ ಅಭಿವೃದ್ದಿ ಹೊಂದಲಿ.

– ಎಸ್.ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು

ಎಪಿಎಂಸಿ ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆ ಮತ್ತು ಸೌಲಭ್ಯ ನೀಡುವ ಮೂಲಕ ರೈತರ ಬೆನ್ನೆಲುಬಾಗಿದೆ. ಇದೇ ನೂತನ ಕಟ್ಟಡದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ಕೂಡ ಬರಲಿದ್ದು, ಸಾರ್ವಜನಿಕರಿಗೆ ಅನುಕೂಲವಾಗಲಿದೆ.

– ಸಿದ್ದಲಿಂಗ ರೆಡ್ಡಿ, ಅಪರ ಜಿಲ್ಲಾಧಿಕಾರಿ

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್.ಎಸ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಲೆಮಾರಿಗಳ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ, ಹಾಪ್‌ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ತಾಲ್ಲೂಕು ಅಧ್ಯಕ್ಷ ಹೆಚ್.ಎಂ.ಮಧು, ಕೃಷಿ ವಿವಿ ನಿರ್ದೇಶಕ ಹೆಚ್.ಡಿ.ದೇವಿಕುಮಾರ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಎಪಿಎಂಸಿ ಕಾರ್ಯದರ್ಶಿ ಸತೀಶ್.ಹೆಚ್.ವೈ, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...