
ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ, ಭಾರತ ಸರ್ಕಾರದಿಂದ 2026ನೇ ಸಾಲಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ 5 ರಿಂದ 18 ವರ್ಷದೊಳಗಿನ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ » ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜಿಲ್ಲೆಯಲ್ಲಿ ಉದ್ಯೋಗ ಮೇಳ, ನೇರ ಸಂದರ್ಶನದ ಮೂಲಕ ಆಯ್ಕೆ
ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ, ಸಂಸ್ಕೃತಿ ಮತ್ತು ನೂತನ ಅವಿಷ್ಕಾರಗಳನ್ನು ಮಾಡಿದ ಎಲ್ಲಾ ಮಕ್ಕಳು ಇಲಾಖೆಯ ವೆಬ್‌ಸೈಟ್ https://.awards.gov.in ಮೂಲಕ ಜುಲೈ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ ಆರ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ವೀಕ್ಷಣಾಲಯ ಕಟ್ಟಡ, 100 ಅಡಿರಸ್ತೆ, ಆಲ್ಕೋಳ, ಶಿವಮೊಗ್ಗ, ದೂ.ಸಂ.: 08182-295709 ನ್ನು ಸಂಪರ್ಕಿಸುವುದು.
ಇದನ್ನೂ ಓದಿ » ಫಾರಂ ಹೌಸ್‌ನಿಂದ ನಾಯಿ ಹೊತ್ತೊಯ್ದ ಚಿರತೆ, ಸಿಸಿ ಟಿವಿಯಲ್ಲಿ ದೃಶ್ಯ ಸೆರೆ