14 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 258 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸ್ತುತ ಖಾಲಿ ಇರುವ 14 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ತಲಾ ಒಂದರಂತೆ ಒಟ್ಟು 14 ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಕೆಳಗಿನ ಗ್ರಾಮಗಳು :

  • ತೀರ್ಥಹಳ್ಳಿ ತಾಲ್ಲೂಕಿನ ಬಾಂಡ್ಯ ಕುಕ್ಕೆ, ಹೊಸಹಳ್ಳಿ. ಸಾಗರ ತಾಲ್ಲೂಕಿನ ಕುದರೂರು, ಕಲ್ಮನೆ, ಹೆಗ್ಗೋಡು.
  • ಭದ್ರಾವತಿ ತಾಲ್ಲೂಕಿನ ವೀರಾಪುರ, ಕೂಡ್ಲಿಗೆರೆ.
  • ಹೊಸನಗರ ತಾಲ್ಲೂಕಿನ ಸುಳುಗೋಡು, ತ್ರಿಣಿವೆ.
  • ಸೊರಬ ತಾಲ್ಲೂಕಿನ ಭಾರಂಗಿ, ಹರೀಶಿ. ಶಿಕಾರಿಪುರ ತಾಲ್ಲೂಕಿನ‌ ಮುದ್ದನಹಳ್ಳಿ, ಅಂಬಾರಗೊಪ್ಪ.
  • ಶಿವಮೊಗ್ಗ ತಾಲ್ಲೂಕಿನ ಚೋರಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಿವು ಕೇಂದ್ರಗಳಲ್ಲಿ ಈ ಹುದ್ದೆಗಳು ಖಾಲಿ ಇದ್ದು, ನಿಯಮಾನುಸಾರ ರೋಸ್ಟರ್ ಬಿಂದುಗಳ ಆಧಾರದ ಮೇಲೆ ನೇಮಕಾತಿ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಧೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಬೇಕಾಗಿದೆ. ಅರ್ಜಿಗಳನ್ನು ಸಲ್ಲಿಸಲು ಜುಲೈ 8 ಕಡೆಯ ದಿನವಾಗಿದೆ.

ಅರ್ಜಿ ನಮೂನೆಗಳು ಆಯಾ 14 ಗ್ರಾಮ ಪಂಚಾಯತಿಗಳಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://shivamogga.nic.in ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಲು ಶಿವಮೊಗ್ಗ ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ (ಆಡಳಿತ) ಹಾಗೂ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಜೂ.20: ಶಿವಮೊಗ್ಗದಲ್ಲಿ ಉದ್ಯೋಗ ನೇರ ಸಂದರ್ಶನ, ಯಾರೆಲ್ಲಾ ಭಾಗವಹಿಸಬಹುದು?

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...