
ಶಿವಮೊಗ್ಗ : ನಾಳೆ (ಸೆ.06) ರಂದು ನಡೆಯಲಿರುವ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತವು ಶಿವಮೊಗ್ಗ ನಗರದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿದೆ. ಈ ಕುರಿತು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.
ಇಂದು (ಸೆ.05) ಸಂಜೆ 6.00 ಗಂಟೆಯಿಂದ ಆರಂಭಗೊಂಡು, ನಾಳೆ (ಸೆ.07) ರ ಬೆಳಿಗ್ಗೆ 6.00 ಗಂಟೆಯವರೆಗೆ, ಒಟ್ಟು 24 ಗಂಟೆಗಳ ಕಾಲ ನಗರ ವ್ಯಾಪ್ತಿಯಲ್ಲಿ ‘ಡ್ರೈ ಡೇ’ ಘೋಷಿಸಲಾಗಿದೆ.
ಈ ಅವಧಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ, ಸಾಗಾಟ ಮತ್ತು ಸಂಗ್ರಹಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.