
ಭದ್ರಾವತಿ : ಈದ್ ಮಿಲಾದ್ ಮೆರವಣಿಗೆ ಸಂದರ್ಭ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ » ವಿಭಿನ್ನ ಕಥಾ ಹಂದರ ಹೊಂದಿರುವ ‘ಕಟುದಾರಿ’ ಕಿರು ಚಿತ್ರವು ಇಂದು ಬಿಡುಗಡೆ
ದೊಡ್ಡ ಸಂಖ್ಯೆಯಲ್ಲಿ ಸೇರಿರುವ ಯುವಕರ ಗುಂಪು ಮೊಬೈಲ್ ಟಾರ್ಚ್‌ಗಳನ್ನು ಹಿಡಿದು ನಿಂತಿದ್ದಾರೆ. ಮಧ್ಯದಲ್ಲಿದ್ದ ಯುವಕರ ಪೈಕಿ ಕೆಲವರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಇದಾಗಿದ್ದು, ಗಾಂಧಿ ವೃತದಲ್ಲಿ ಅಳವಡಿಸಲಾಗಿದ್ದ ಡಿಜೆ ಸೌಂಡಿಗೆ ಕುಣಿಯುವ ವೇಳೆ ಕೆಲ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಮಾತೃ ವಾತ್ಸಲ್ಯ ಆಸ್ಪತ್ರೆಯಲ್ಲೀಗ ನುರಿತ ವೈದ್ಯರ ಸೇವೆ ಲಭ್ಯ: ಡಾ. ಪೃಥ್ವಿ.ಬಿ.ಸಿ.
ಇನ್ನು, ವಿಡಿಯೋ ವೈರಲ್ ಬೆನ್ನಿಗೆ ಪೊಲೀಸ್ ಇಲಾಖೆ ಎಫ್‌ಐಆರ್ ದಾಖಲಿಸಲು ಸಿದ್ಧತೆ ನಡೆಸಿದೆ. ಈ ಸಂಬಂಧ ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ರವಾನಿಸಿರುವ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ಭದ್ರಾವತಿಯಲ್ಲಿ ಎಫ್‌ಐಆರ್ ದಾಖಲಿಸಲಾಗುತ್ತಿದೆ. ಘೋಷಣೆ ಕೂಗಿದವರು ಯಾರು, ವಿಡಿಯೋದ ಅಸಲಿಯತ್ತನ್ನು ಪರಿಶೀಲಿಸಲಾಗುತ್ತಿದೆ. ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.