1,886 ಬೂತ್‌ಗಳಲ್ಲಿ ಸೇವೆಯ ಸಂಭ್ರಮ: ಸೆ.17 ರಿಂದ ‘ಸೇವಾ ಸಂಕಲ್ಪ ಅಭಿಯಾನ’: ಬಿವೈಆರ್

ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸತತ ಜನಸೇವೆ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಸೆ.17 ರಂದು ಚಾಲನೆ ನೀಡಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರದ ಮುಖ್ಯಸ್ಥರಾಗಿ ಸತತ 25 ವರ್ಷಗಳ ಸೇವೆ ಪೂರ್ಣಗೊಳಿಸಿರುವ ನರೇಂದ್ರ ಮೋದಿ ಅವರ ಜನ್ಮದಿನವನ್ನು ಜನಸೇವಾ ಚಳವಳಿಯಾಗಿ ಆಚರಿಸಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಕರೆ ನೀಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಅಭಿಯಾನ ನಡೆಯುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲೂ ಅದೇ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ಗುಜರಾತ್ ಮುಖ್ಯಮಂತ್ರಿಯಾಗಿ 13 ವರ್ಷ ಹಾಗೂ ಪ್ರಧಾನಿಯಾಗಿ 12 ವರ್ಷಗಳ ಆಡಳಿತ ನೀಡಿರುವ ನರೇಂದ್ರ ಮೋದಿ ಅವರು, ನೆಹರು ಅವರ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ ಎಂದು ರಾಘವೇಂದ್ರ ಹೇಳಿದರು. ಪ್ರಧಾನಿ ಹುದ್ದೆಯಲ್ಲಿದ್ದ 12 ವರ್ಷಗಳಲ್ಲಿ 25 ಕೋಟಿಗೂ ಹೆಚ್ಚು ಜನರನ್ನು ಬಡತನದಿಂದ ಮೇಲಕ್ಕೆತ್ತಲಾಗಿದೆ. ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ 80 ಕೋಟಿ ಜನರಿಗೆ ಉಚಿತ ಪಡಿತರ, 12 ಕೋಟಿ ಶೌಚಾಲಯ ಹಾಗೂ 4 ಕೋಟಿಗೂ ಹೆಚ್ಚು ಬಡವರಿಗೆ ಉಚಿತ ಮನೆಗಳನ್ನು ನಿರ್ಮಿಸುವ ಮೂಲಕ ದೇಶದ ಆರ್ಥಿಕ ಬೆಳವಣಿಗೆಗೆ ವೇಗ ನೀಡಲಾಗಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸೆ.17 ರಿಂದ ಅ.17 ರವರೆಗೆ ನಡೆಯಲಿರುವ ಈ ಅಭಿಯಾನದಲ್ಲಿ ಜಿಲ್ಲೆಯ ಎಲ್ಲಾ 1,886 ಬೂತ್‌ಗಳಲ್ಲೂ ವಿವಿಧ ಸೇವಾ ಹಾಗೂ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ವಿಕಸಿತ ಭಾರತ-2047 ಕ್ಕೆ ಶಕ್ತಿ ಕೋರಿ, ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಜನಪರ ಆಡಳಿತ ಮತ್ತು ಸಾಧನೆಗಳಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಬಿ.ವೈ.ರಾಘವೇಂದ್ರ, ಸಂಸದರು


  • ಸೆ.17 ರಂದು ‘ಆಶೀರ್ವಾದದ ದೀಪ’ ಕಾರ್ಯಕ್ರಮ ನಡೆಯಲಿದ್ದು, ಕ್ಷೇತ್ರದ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗುವುದು. ಸಂಜೆ ಕಾರ್ಯಕರ್ತರು ಹಾಗೂ ನಾಗರಿಕರು ತಮ್ಮ ಮನೆಗಳ ಮುಂದೆ ದೀಪ ಬೆಳಗಿಸಿ, ಅದರ ಚಿತ್ರಗಳನ್ನು ಹ್ಯಾಶ್‌ಟ್ಯಾಗ್‌ನೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಿದ್ದಾರೆ ಎಂದರು.
  • ಸೆ.18 ರಿಂದ 24 ರವರೆಗೆ ‘ನಮೋ ಸೇವಾ ಗಾಥಾ’ ಕಾರ್ಯಕ್ರಮದಡಿ ಮಹಿಳಾ ಮೋರ್ಚಾದಿಂದ ಸ್ವಚ್ಛತಾ ಅಭಿಯಾನ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮೋರ್ಚಾಗಳಿಂದ ರಕ್ತದಾನ ಶಿಬಿರ, ರೈತ ಮೋರ್ಚಾದಿಂದ ಉಚಿತ ಆರೋಗ್ಯ ತಪಾಸಣೆ, ನಾಗರಿಕ ಸೇವಾ ಕಾರ್ಯಾಗಾರ, ಯುವ ಮೋರ್ಚಾದಿಂದ ಸೈಕಲ್ ಜಾಥಾ ಹಾಗೂ ಸಾಂಸ್ಕೃತಿಕ ಪ್ರಕೋಷ್ಠದಿಂದ ಬೀದಿ ನಾಟಕ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
  • ಸೆ.25 ರಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಯಂತಿ ಅಂಗವಾಗಿ ಅಂತ್ಯೋದಯ ಉಪನ್ಯಾಸ ನಡೆಯಲಿದೆ.
  • ಸೆ.27 ರಂದು ಬೂತ್‌ಗಳಲ್ಲಿ ಉಚಿತ ಉಪಕರಣ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
  • ಅ.02 ರಿಂದ 14 ರವರೆಗೆ ಗಾಂಧಿ ಜಯಂತಿ ಹಾಗೂ ‘ಮನ್ ಕೀ ಬಾತ್’ ವೀಕ್ಷಣೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ, ಖಾದಿ ಪ್ರದರ್ಶನ ಹಾಗೂ ಸ್ವದೇಶಿ ಸಂತೆ ಸೇರಿದಂತೆ ಕಾರ್ಯಕ್ರಮಗಳು ನಡೆಯಲಿವೆ. ‘ಲೋಕಲ್ ಫಾರ್ ವೋಕಲ್’ಗೆ ಉತ್ತೇಜನ ನೀಡುವ ಉದ್ದೇಶದಿಂದ ಖಾದಿ ಮತ್ತು ಸ್ವದೇಶಿ ಉತ್ಪನ್ನಗಳಿಗೆ ಆದ್ಯತೆ ನೀಡಲಾಗುವುದು.
  • ಅ.07 ರಿಂದ 14 ರವರೆಗೆ ಶಾಲಾ ಮಕ್ಕಳಿಗೆ ಚಿತ್ರಕಲಾ ಮತ್ತು ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗುವುದು.
  • ಅ.17 ರಂದು ಬೃಹತ್ ಮಾನವ ರಂಗೋಲಿ ಹಾಗೂ ಸೇವಾ ಜ್ಯೋತಿ ಬೆಳಗಿಸುವ ಮೂಲಕ ಒಂದು ತಿಂಗಳ ಸುದೀರ್ಘ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಅಧಿಕೃತ ತೆರೆ ಬೀಳಲಿದೆ.

ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಪ್ರಮುಖರಾದ ಶಿವರಾಜ್, ಹರಿಕೃಷ್ಣ, ಎಸ್.ಎಸ್. ಜ್ಯೋತಿಪ್ರಕಾಶ್, ಬಳ್ಳೆಕೆರೆ ಸಂತೋಷ್, ಕೆ.ಜಿ. ಕುಮಾರಸ್ವಾಮಿ, ರಾಜೇಶ್ ಕಾಮತ್, ಜಿಲ್ಲಾ ಮಾಧ್ಯಮ ಪ್ರಮುಖ್ ಚಂದ್ರಶೇಖರ್, ಜಿಲ್ಲಾ ಮಾಧ್ಯಮ ಸಹ ಪ್ರಮುಖ್ ಮಂಜುನಾಥ್ ಎನ್. ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...