
ಬೆಂಗಳೂರು : ರಾಜ್ಯದಲ್ಲಿ ದಸರಾ ರಜೆಯನ್ನು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 07 ರವರೆಗೆ ಘೋಷಿಸಿತ್ತು. ಆದರೆ ನಾಳೆಯಿಂದ ಆರಂಭವಾಗಬೇಕಿದ್ದ ದಸರಾ ರಜೆಯನ್ನು ರಾಜ್ಯ ಸರ್ಕಾರವು ಮತ್ತೆ 10 ದಿನಗಳ ಕಾಲ ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 22 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದ್ದು, ಇಂದು ಪೂರ್ಣ ಗೊಳ್ಳಬೇಕಿದ್ದ ಸಮೀಕ್ಷೆಯು ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಆದ್ದರಿಂದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದ್ದು, ರಾಜ್ಯದ ಶಾಲೆಗಳ ದಸರಾ ರಜೆಯನ್ನು ಅಕ್ಟೋಬರ್ 18 ರವರೆಗೆ ದಸರಾ ರಜೆಯನ್ನು ವಿಸ್ತರಿಸಿ ಆದೇಶ ನೀಡಲಾಗಿದೆ.
ದಸರಾ ರಜೆಯನ್ನು ವಿಸ್ತರಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘವು ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಅದರಂತೆ, ಇಂದು ( ಅ.07) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. 10 ದಿನಗಳವರೆಗೆ ರಜೆಯನ್ನು ವಿಸ್ತರಿಸಿ, ಅಕ್ಟೋಬರ್ 18 ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.