
ಶಿವಮೊಗ್ಗ : ಸೆ.06 ರಂದು ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕೆಳಕಂಡಂತೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.
ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಮೋಟಾರು ವಾಹನ ಕಾಯ್ದೆ 1988 ಕಲಂ 115 & 117 ರ ಅನ್ವಯ ಅಂದು ಬೆಳಿಗ್ಗೆ 6.00 ರಿಂದ ರಾತ್ರಿ 12.00 ಗಂಟೆವರೆಗೆ ವಾಹನ ಸಂಚಾರ ನಿಷೇಧ, ನಿಲುಗಡೆ ಮತ್ತು ಮಾರ್ಗ ಬದಲಾವಣೆ ಮಾಡಲಾಗಿದೆ.
ಸೆ.06 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ-ಎನ್ ಪಿ ಎಂ ಮುಖ್ಯ ರಸ್ತೆ-ರಾಮಣ್ಣ ಶ್ರೇಷ್ಠಿ ಪಾರ್ಕ್-ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್ ಎನ್ ಸರ್ಕಲ್ -ಎ.ಎ.ಸರ್ಕಲ್- ನೆಹರು ರಸ್ತೆ- ಗೋಪಿ ಸರ್ಕಲ್- ದುರ್ಗಿಗುಡಿ ಮಾರ್ಗವಾಗಿ ಮಹಾವೀರ ಸರ್ಕಲ್ – ಡಿವಿಎಸ್ ಸರ್ಕಲ್ –ಕಾನ್ವೆಂಟ್ ರಸ್ತೆ – ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದ ಹತ್ತಿರ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಗುವುದು. ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ನಿಷೇಧಿಸಲಾಗಿದೆ.
ಬದಲಾದ ವಾಹನ ಸಂಚಾರ ಮಾರ್ಗ :
ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು ಅತಿಗಣ್ಯ ವ್ಯಕ್ತಿಗಳ ವಾಹನಗಳು ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಪ್ಪನಾಯಕ ವೃತ್ತದ ಅಂಡರ್ ಪಾಸ್ ಸ್ಥಿತಿ ಶೋಚನೀಯ, ಸ್ಥಳಕ್ಕೆ ಶಾಸಕ ಚೆನ್ನಿ ಭೇಟಿ, ತ್ವರಿತ ಕ್ರಮಕ್ಕೆ ಸೂಚನೆ