ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ಸೇರಿದಂತೆ ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ, ಯಾವಾಗ?

ಶಿವಮೊಗ್ಗ : ರೈಲು ಸಂಖ್ಯೆ 16206 ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 16205 ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲುಗಳು 2026 ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ರದ್ದುಗೊಳ್ಳಲಿದೆ.

ಇದನ್ನೂ ಓದಿ » SSLC ಫಲಿತಾಂಶ: ಶಿವಮೊಗ್ಗ ಜಿಲ್ಲೆಗೆ ಶೇ.96.56 ಫಲಿತಾಂಶ, ಇಲ್ಲಿದೆ ತಾಲ್ಲೂಕುವಾರು ಮಾಹಿತಿ

ರೈಲು ಸಂಖ್ಯೆ 16225 ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು 2026 ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ಮೈಸೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಗೊಂಡಿದ್ದು, ಈ ರೈಲು ಅರಸೀಕೆರೆ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಪ್ರಯಾಣ ಆರಂಭಿಸಲಿದೆ.

ಅದೇ ರೀತಿಯಲ್ಲಿ, ರೈಲು ಸಂಖ್ಯೆ 56266 ಮೈಸೂರು–ಅರಸೀಕೆರೆ ಪ್ಯಾಸೆಂಜರ್ ರೈಲು ಮಾವಿನಕೆರೆ ಮತ್ತು ಅರಸೀಕೆರೆ ನಡುವಿನ ಸೇವೆ ಭಾಗಶಃ ರದ್ದುಗೊಳ್ಳಲಿದ್ದು, 2026 ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ಮಾವಿನಕೆರೆ ನಿಲ್ದಾಣದಲ್ಲೇ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ.

ರೈಲು ಸಂಖ್ಯೆ 16515 ಯಶವಂತಪುರ–ಕಾರವಾರ ಎಕ್ಸ್‌ಪ್ರೆಸ್ ರೈಲು 2026 ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ಬೆಂಗಳೂರು ವಿಭಾಗದಲ್ಲಿ ಸುಮಾರು 65 ನಿಮಿಷಗಳ ವಿಳಂಬದೊಂದಿಗೆ ಸಂಚರಿಸಲಿದೆ ಎಂದು ಮೈಸೂರು ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಪೃಥ್ವಿ ಎಸ್ ಹುಲ್ಲತಿರವರು ತಿಳಿಸಿದ್ದಾರೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...