ಜಿಲ್ಲಾಧಿಕಾರಿಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ, ಪರಿಶೀಲನೆ

ಶಿವಮೊಗ್ಗ : ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿದ್ಯಾರ್ಥಿನಿಲಯಕ್ಕೆ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರಿಗೆ ಸಿಗುತ್ತಿರುವ ವೈದ್ಯಕೀಯ ಸೇವೆಗಳ ಬಗ್ಗೆ ಮಾಹಿತಿ ಪಡೆದರು. ಕೇಂದ್ರದ ಕಾರ್ಯನಿರ್ವಹಣೆ, ಅಗತ್ಯ ಔಷಧಿಗಳ ದಾಸ್ತಾನು ಇದೆಯೇ ಎಂಬುದನ್ನು ಪರಿಶೀಲಿಸಿ, ರೋಗಿಗಳೊಂದಿಗೆ ಕೇಂದ್ರದಿಂದ ದೊರಕುತ್ತಿರುವ ಸೌಲಭ್ಯಗಳ ಕುರಿತು ಮಾತನಾಡಿದರು.

ಬಳಿಕ ಹತ್ತಿರದ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮೊದಲು ಅಡುಗೆ ಕೋಣೆ ಮತ್ತು ದಾಸ್ತಾನು ಕೊಠಡಿಯನ್ನು ವೀಕ್ಷಿಸಿದರು. ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಖುದ್ದಾಗಿ ಪರಿಶೀಲನೆ ನಡೆಸಿದರು. ಮೆನುವಿನಂತೆ ಆಹಾರ ನೀಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿ, ಶುಚಿಗೊಳಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಲು ಸೂಚಿಸಿದರು.

ನಿಲಯದ ಆವರಣ ಮತ್ತು ಶೌಚಾಲಯಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲು ವಾರ್ಡನ್‌ಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಓದಿಗೆ ಪೂರಕವಾದ ವಾತಾವರಣವಿದೆಯೇ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿದೆಯೇ ಎಂದು ವಿಚಾರಿಸಿದರು.

ಇದನ್ನೂ ಓದಿ » ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗೆ ಲೋಕಾ ಶಾಕ್!

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...