ಶಾಲಾ ವಾಹನ ತಪಾಸಣೆ ವೇಳೆ 7 ಚಾಲಕರ ವಿರುದ್ಧ ಡ್ರಂಕ್ ಅಂಡ್ ಡ್ರೈವ್ ಪ್ರಕರಣ ದಾಖಲು, ಡಿಎಲ್ ರದ್ದತಿಗೆ ಪೊಲೀಸರ ವರದಿ

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಒಟ್ಟು 7 ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅವರ ಚಾಲನಾ ಪರವಾನಗಿ ರದ್ದುಪಡಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಶಿವಮೊಗ್ಗದ ಸಂಚಾರ ಠಾಣೆ ಪೊಲೀಸರು ವರದಿ ನೀಡಿದ್ದಾರೆ.

ಇದನ್ನೂ ಓದಿ » ನಾಳೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ?

ಮಕ್ಕಳನ್ನು ಕರೆದೊಯ್ಯುವ ಒಟ್ಟು 457 ಶಾಲಾ ವಾಹನಗಳನ್ನು ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ದಿಢೀರ್‌ ತಪಾಸಣೆ ನಡೆಸಲಾಯಿತು. ಈ ವೇಳೆ 7 ಚಾಲಕರು ಮದ್ಯ ಸೇವಿಸಿ ವಿದ್ಯಾರ್ಥಿಗಳಿದ್ದ ವಾಹನವನ್ನು ಚಾಲನೆ ಮಾಡುತ್ತಿರುವುದು ದೃಢಪಟ್ಟಿದೆ. ಈ ಹಿನ್ನೆಲೆ ಅವರ ವಿರುದ್ಧ ಡ್ರಂಕ್‌ ಅಂಡ್‌ ಡ್ರೈವ್‌ ಪ್ರಕರಣ ದಾಖಲಿಸಲಾಗಿದೆ.

ತಪಾಸಣೆ ಸಂದರ್ಭ ಪೊಲೀಸರು ಶಾಲಾ-ಕಾಲೇಜು ವಾಹನಗಳ ಸುಸ್ಥಿತಿಯನ್ನು ಪರಿಶೀಲನೆ ನಡೆಸಿದ್ದಾರೆ. ವಾಹನಗಳಿಗೆ ಸಂಬಂಧಿಸಿದ ವಿಮೆ, ಎಮಿಷನ್ ರಿಪೋರ್ಟ್ ಹಾಗೂ ಫಿಟ್‌ನೆಸ್ ಸರ್ಟಿಫಿಕೇಟ್‌ಗಳನ್ನು ನಿಯಮಾನುಸಾರ ಕಡ್ಡಾಯವಾಗಿ ಚಾಲ್ತಿಯಲ್ಲಿ ಇಟ್ಟುಕೊಳ್ಳುವಂತೆ ಚಾಲಕರಿಗೆ ಮತ್ತು ಶಾಲಾ ಆಡಳಿತ ಮಂಡಳಿಯವರಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ರೆಡ್‌ ಅಲರ್ಟ್‌, ಎರಡು ದಿನಗಳ ಕಾಲ ಭಾರೀ ಮಳೆ, ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ 

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...